ಮಂಗಳೂರು : ಮಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮೂವರು ಯುವತಿಯರು ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಂಗಳೂರಿನ ಉಚ್ಚಿಲ ಬಳಿಯ ಬೀಚ್ ನ ಖಾಸಗಿ ರೆಸಾರ್ಟ್ ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ್ದು, ಮೃತ ಯುವತಿಯರು ಮೈಸೂರು ಮೂಲದವರಾಗಿದ್ದು, ಕುರುಬರಹಳ್ಳಿಯ ನಿವಾಸಿ ನಿಶಿತಾ ಎಂಡಿ (21), ವಿಜಯನಗರದ ದೇವರಾಜ ಮೊಹಲ್ಲಾದ ಪಾರ್ವತಿ (20), ಮೈಸೂರಿನ ಕೆ.ಆರ್. ಮೊಹಲ್ಲಾದ ಕೀರ್ತನಾ (20) ಎಂದು ಗುರುತಿಸಲಾಗಿದೆ.
ಈ ಘಟನೆಯ ಬಳಿಕ ಸೋಮೇಶ್ವರದ VAZCO ಬೀಚ್ ರೆಸಾಟ್೯ಗೆ ಅಧಿಕಾರಿಗಳು ಬೀಗಮುದ್ರೆ ಹಾಕಿದ್ದು, ರೆಸಾಟ್೯ನ ಟ್ರೇಡ್ ಲೈಸನ್ಸ್ ಮತ್ತು ಟೂರಿಸಂ ಪರವಾನಿಗೆಯನ್ನು ಅಮಾನತ್ತಿನಲ್ಲಿಡಲಾಗಿದೆ ಎಂದು ಮಂಗಳೂರು ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.