image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪತ್ರಿಕಾ ರಂಗದ ಸಾಧಕ ಪುರಸ್ಕಾರ

ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಪತ್ರಿಕಾ ರಂಗದ ಸಾಧಕ ಪುರಸ್ಕಾರ

ಮಂಗಳೂರು: 71 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ದಲ್ಲಿ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ನಿ, ಮತ್ತು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ ಯವರಿಗೆ ಪತ್ರಿಕಾ ರಂಗದ ಸಾಧಕ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಅಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರ ಕುಮಾರ್ ಪ್ರದಾನ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸ್ಪೀಕರ್ ಯು ಟಿ ಖಾದರ್, ರಾಜ್ಯ ಸಹಕಾರ ಸಚಿವ ರಾಜಣ್ಣ, ಅರೋಗ್ಯ ದಿನೇಶ್ ಗುಂಡೂರಾವ್,ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ ಟಿ ದೇವೇಗೌಡ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ