image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿಡಿಲು ಬಡಿದು ಬಾಲಕ ದಾರುಣ ಸಾವು

ಸಿಡಿಲು ಬಡಿದು ಬಾಲಕ ದಾರುಣ ಸಾವು

ಬಂಟ್ವಾಳ : ಸಿಡಿಲು ಬಡಿದು 14 ವರ್ಷದ ಬಾಲಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದಲ್ಲಿ ಭಾನುವಾರ ನಡೆದಿದೆ. ಬಂಟ್ವಾಳದ ಮುರಿಯಾಜಿ ನಿವಾಸಿ ಚಂದ್ರಹಾಸ ಎಂಬವರ ಪುತ್ರ ಸುಬೋಧ್ (14) ಮೃತರು ದುರ್ದೈವಿ.

ಸಂಜೆ 5:30 ರ ಸುಮಾರಿಗೆ ಸುಬೋಧ್ ತನ್ನ ಮನೆಯ ಹೊರಗೆ ಕುಳಿತಿದ್ದಾಗ ಈ ಘಟನೆ ಸಂಭವಿಸಿದ್ದು, ತಕ್ಷಣ ಸಿಡಿಲು ಬಡಿದು ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಕುಟುಂಬಸ್ಥರು ಆತನನ್ನು ಹತ್ತಿರದ ಕ್ಲಿನಿಕ್‌ಗೆ ಕರೆದೊಯ್ದದಿದ್ದಾರೆ. ಅಲ್ಲಿಂದ  ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಷ್ಟರಲ್ಲಿ ಬಾಲಕ ಮೃತಪಟ್ಟಿದ್ದು, ವೈದ್ಯರು ಅವರ ಸಾವನ್ನು ದೃಢಪಡಿಸಿದ್ದಾರೆ. ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಸುಬೋಧ್ ನನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.

ತಹಶೀಲ್ದಾರ್ ಅರ್ಚನಾ ಭಟ್ ಅವರು ನೊಂದ ಕುಟುಂಬಕ್ಕೆ ನೆರವಾಗುವಂತೆ ಕಂದಾಯ ಅಧಿಕಾರಿಗಳಿಗೆ ಸೂಚಿಸಿದ್ದು, ವಿಟ್ಲ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ, ಗ್ರಾ.ಪಂ ಆಡಳಿತಾಧಿಕಾರಿ ಅನಿಲ್ ಕುಮಾರ್, ಕೆದಿಲ ಪಂಚಾಯತ್ ಅಧ್ಯಕ್ಷ ಹರೀಶ್ ವಾಲ್ತಾಜೆ, ಸದಸ್ಯರಾದ ಉಮೇಶ್ ಮುರ್ವ, ಹಜೀದ್ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ .

Category
ಕರಾವಳಿ ತರಂಗಿಣಿ