ಮಂಗಳೂರು: ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡದ ದೇವಸ್ಥಾನ ಮತ್ತು ದೈವಸ್ಥಾನಗಳಿಗೆ ಸೆಲೆಬ್ರಿಟಿಗಳು ಬೇಟಿ ನೀಡುವುದು ಸರ್ವೇ ಸಾಮಾನ್ಯವಾಗಿದೆ.
ಈ ನಡುವೆ ಭಾರತ ಕ್ರಿಕೆಟ್ ತಂಡದ ಆಟಗಾರ ಕುಮಾರ್ ಯಾದವ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.
ಪತ್ನಿ ಸಮೇತ ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ, ಅಭಿಷೇಕ ನೆರವೇರಿಸಿದರು.