ಮಂಗಳೂರು : ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿಯವರ ಮನೆ ಮತ್ತು ಕಚೇರಿ ಮೇಲೆ ಇಂದು ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೃಷ್ಣವೇಣಿಯವರ ಮನೆ ಹಾಗೂ ನಗರದ ಮಲ್ಲಿಕಟ್ಟೆಯಲ್ಲಿರುವ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದು, ಲೋಕಾಯುಕ್ತ ಎಸ್ಪಿ ನಟರಾಜ್ ನೇತೃತ್ವದಲ್ಲಿ ಮಂಗಳೂರು ಹಾಗೂ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿ, ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಎರಡು ತಿಂಗಳ ಹಿಂದೆಯಷ್ಟೇ ಮಂಗಳೂರಿಗೆ ವರ್ಗಾವಣೆಯಾಗಿ ಬಂದಿದ್ದಾರೆ.