image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅರಣ್ಯ ಇಲಾಖೆ ಕಚೇರಿಯಲ್ಲಿ ಸಿಬ್ಬಂದಿ ಕುಸಿದು ಬಿದ್ದು ಸಾವು

ಅರಣ್ಯ ಇಲಾಖೆ ಕಚೇರಿಯಲ್ಲಿ ಸಿಬ್ಬಂದಿ ಕುಸಿದು ಬಿದ್ದು ಸಾವು

ಬಂಟ್ವಾಳ: ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ವೀರಕಂಬದ ನಿವಾಸಿ ಜಯರಾಮ ಮೂಲ್ಯ (47) ಮೃತಪಟ್ಟ ಸಿಬ್ಬಂದಿ. ಅವರು ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು,  ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ.

ಕಚೇರಿಯಲ್ಲಿ ಒಬ್ಬನೇ ಕರ್ತವ್ಯದಲ್ಲಿದ್ದು ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ ವೇಳೆ ಟೇಬಲ್‌ ಮೇಲೆ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾಗಿರಬೇಕು ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

 ಬೆಳಿಗ್ಗೆ ಸುಮಾರು 6.30 ವರೆಯವರೆಗೂ ಇಲಾಖೆಯ ಬಾಗಿಲು ಮುಚ್ಚಿಕೊಂಡಿದ್ದನ್ನು ಕಂಡು ಇಲಾಖೆಯ ಚಾಲಕ ಕಿಟಕಿ ಬಾಗಿಲು ತೆರದು ನೋಡಿದಾಗ ಜಯರಾಮ ಅವರು ಟೇಬಲ್ ಮೇಲೆ ಬಿದ್ದ ಸ್ಥಿತಿಯಲ್ಲಿರುವುದು ಕಂಡು ಬಂದಿದೆ ಎಂದು ವರದಿಯಾಗಿದೆ.

Category
ಕರಾವಳಿ ತರಂಗಿಣಿ