image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಮಯದಲ್ಲಿ ಕಾಡಾನೆ ಎಂಟ್ರಿ

ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಮಯದಲ್ಲಿ ಕಾಡಾನೆ ಎಂಟ್ರಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ. ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ.

ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದ್ದು, ಪುತ್ತೂರು ಎ.ಸಿ.ಜುಬಿನ್ ಮೊಹಪಾತ್ರ ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.

 

Category
ಕರಾವಳಿ ತರಂಗಿಣಿ