ಮಂಗಳೂರು: ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಮಂಗಳೂರು- ಕಾರ್ಕಳ ನಡುವೆ ಡಿ.12ರಿಂದ ಪ್ರಾಯೋಗಿಕವಾಗಿ ಬಸ್ ಸಂಚಾರ ನಡೆಸಲು ಕೆಎಸ್ಸಾರ್ಟಿಸಿ ತೀರ್ಮಾನಿಸಿದೆ. ರಾಜ್ಯ ಸರಕಾರ ಶಕ್ತಿ ಯೋಜನೆ ಪರಿಚಯಿಸಿದ ಬಳಿಕ ಮಂಗಳೂರಿನಿಂದ ಕಾರ್ಕಳ ನಡುವೆ ಸರಕಾರಿ ಬಸ್ ಓಡಿಸಲು ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ, ಆರ್‌ಟಿಒ, ಕೆಎಸ್ಸಾರ್ಟಿಸಿ ಅಧಿಕಾರಿಗಳ ಜತೆ ವಿಧಾನ ಪರಿಷತ್ ಸದಸ್ಯ ಐವನ್ ಡಿ' ಸೋಜಾ ಕೆಲವು ದಿನಗಳ ಹಿಂದೆ ಚರ್ಚಿಸಿದ್ದರು. ಈಗ ಬಸ್ ಸಂಚಾರಕ್ಕೆ ತಾತ್ಕಾಲಿಕ ಪರವಾನಿಗೆ ನೀಡಲು ಆರ್‌ಟಿಒ ಮುಂದಾಗಿದೆ. ನಾಲ್ಕು ತಿಂಗಳ ಅವಧಿಗೆ ತಾತ್ಕಾಲಿಕ ಪರವಾನಿಗೆ ದೊರಕಿದೆ. ಈ ಬಸ್‌ಗಳು ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ನಂತೂರು, ಗುರುಪುರ, ಕೈಕಂಬ, ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ತೆರಳಲಿದೆ. ಮಂಗಳೂರು ಮತ್ತು ಕಾರ್ಕಳದಿಂದ ತಲಾ ಎರಡು ಬಸ್‌ಗಳು ಸಂಚರಿಸಲಿದ್ದು, ವೇಳಾಪಟ್ಟಿ ಅಂತಿಮವಾಗಬೇಕಿದೆ