image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರೈಲಿನ ಮೆಟ್ಟಿಲಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ಸಾವು

ರೈಲಿನ ಮೆಟ್ಟಿಲಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ಸಾವು

ಬಂಟ್ವಾಳ: ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.17ರ ಮಂಗಳವಾರ ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಸಮೀಪದ ನೆತ್ತರಕೆರೆ ಎಂಬಲ್ಲಿ ನಡೆದಿದೆ.

ಕಡಬ ತಾಲೂಕಿನ ಬಿಳಿನೆಲೆ ಗೂನಡ್ಕ ನಿವಾಸಿ ಶಶಿಕುಮಾರ್ ಎಸ್. ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ರಾತ್ರಿ ಸುಮಾರು 11 ಗಂಟೆಯ ವೇಳೆ ಸುಬ್ರಮಣ್ಯದಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲೊಂದರಿಂದ ಕೆಳಗೆ ಬಿದ್ದು ಇವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶಶಿಕುಮಾರ್‌ ಅವರು ರೈಲಿನ ಮೆಟ್ಟಿಲಿನ ಮೇಲೆ ಕುಳಿತು ಪ್ರಯಾಣಿಸುತ್ತಿದ್ದರು. ಇದೇ ವೇಳೆ ಆಯತಪ್ಪಿ ಕೆಳಗೆ ಬೀಳುವುದನ್ನು ಕಂಡು ಬೋಗಿಯಲ್ಲಿದ್ದ ಇತರರು ಮಂಗಳೂರು ರೈಲ್ವೆ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.

ಅದೇ ವೇಳೆ ರೈಲಿನ ಹಳಿಯ ಸಮೀಪದ ಪೊದೆಯಲ್ಲಿ ತಲೆಗೆ ಏಟು ಬಿದ್ದು ರಕ್ತಸಿಕ್ತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದರೂ ಕೂಡ ಈತನ ಹೆಸರು, ವಿಳಾಸದ ಮಾಹಿತಿ ಸಿಗುವಾಗ ತಡವಾಗಿದೆ ಎಂದು ಪೋಲೀಸರು ಮಾಹಿತಿ ನೀಡಿದ್ದಾರೆ.

Category
ಕರಾವಳಿ ತರಂಗಿಣಿ