image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಡಿ.23ರಂದು ನಡೆಯಲಿದೆ ಐವನ್ ಡಿಸೋಜ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

ಡಿ.23ರಂದು ನಡೆಯಲಿದೆ ಐವನ್ ಡಿಸೋಜ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

ಮಂಗಳೂರು: ಕಳೆದ 9 ವರ್ಷಗಳಿಂದ ಸರ್ವ ಧರ್ಮಗಳ ದೀಪಾವಳಿ, ಕ್ರಿಸ್ಮಸ್, ರಮಝಾನ್ ಹಬ್ಬಗಳನ್ನು ಆಚರಿಸಿಕೊಂಡು ಬರುತ್ತಿರುವ ವಿಧಾನ ಪರಿಷತ್‌ ಶಾಸಕ ಐವನ್ ಡಿಸೋಜ ನೇತೃತ್ವದಲ್ಲಿ ಈ ವರ್ಷ 10ನೇ ವರ್ಷದ ಸರ್ವ ಧರ್ಮ ಕ್ರಿಸ್ಮಸ್ ಸಂಭ್ರಮಾಚರಣೆ, ಕ್ರಿಸ್ಮಸ್ ಕ್ಯಾರಲ್ ಸಂಗೀತ ಸ್ಪರ್ಧೆ ಡಿ.23ರಂದು ನೇತ್ರಾವತಿ ನದಿ ದಡದ ಆಡಂಕುದ್ರುವಿನ ಸೀ-ಬಾಂಕ್ವಿಟ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾರ್ಯಕ್ರಮದ ಸಂಚಾಲಕ ನಾಗೇಂದ್ರ ಕುಮಾರ್ ಹೇಳಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಅಪರಾಹ್ನ 2:30ರಿಂದ ಕ್ಯಾರಲ್ ಸಂಗೀತ ಸ್ಪರ್ಧೆ- 2024ಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಸಂಜೆ 6 ಗಂಟೆಗೆ ಸರ್ವ ಧರ್ಮಗಳ ಕ್ರಿಸ್ಮಸ್ ಸಂಗಮದ ಸಭಾ ಕಾರ್ಯಕ್ರಮ ನಡೆಯಲಿದೆ. ಮಂಗಳೂರು ಧರ್ಮಪ್ರಾಂತ ಧರ್ಮಾಧ್ಯಕ್ಷ ರೆ.ಡಾ. ಪೀಟ‌ರ್ ಪಾವ್ಕ್ ಸಲ್ದಾನ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್, ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ, ಶಾಂತಿ ಪ್ರಕಾಶನದ ಆಡಳಿತ ನಿರ್ದೇಶಕ ಮುಹಮ್ಮದ್ ಕುಂಞ, ಶ್ರೀ ಗುರು ಸಿಂಗ್ ಸಭಾ ಸೊಸೈಟಿಯ ಪ್ರಧಾನ ಕಾರ್ಯದರ್ಶಿ ಸರ್ದಾ‌ರ್ ಇಟ್ಬಾಲ್ ಸಿಂಗ್ ರಾಥೋರ್, ಪೆರ್ಮನ್ನೂರಿನ ಸೈಂಟ್ ಸೆಬೆಸ್ಟಿಯನ್ ಚರ್ಚಿನ ಧರ್ಮಗುರು ರೆ.ಫಾ. ಸಿಪ್ರಿಯನ್ ಪಿಂಟೊ ಕ್ರಿಸ್ಮಸ್ ಸಂದೇಶ ನೀಡಲಿದ್ದಾರೆ.

ಕ್ರಿಸ್ಮಸ್ ಸೌಹಾರ್ದದ ಅಂಗವಾಗಿ ಕ್ಯಾರಲ್ ಸಂಗೀತ ಸ್ಪರ್ಧೆ, ಏಕವ್ಯಕ್ತಿ ಗಾಯನ  ಸ್ಪರ್ಧೆ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಇದೇ ವೇಳೆ ಕ್ರಿಸ್ಮಸ್ ಸಹಭೋಜನ ಏರ್ಪಡಿಸಲಾಗುವುದು ಎಂದು  ತಿಳಿಸಿದರು.

Category
ಕರಾವಳಿ ತರಂಗಿಣಿ