image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ: 5 ಲಕ್ಷ ಅನುದಾನಕ್ಕೆ‌ಆದೇಶ

ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ: 5 ಲಕ್ಷ ಅನುದಾನಕ್ಕೆ‌ಆದೇಶ

ಮಂಗಳೂರು: ನಾಡಿನ ಕಂಬಳ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ಸರಕಾರ ಆದೇಶ ನೀಡಿದೆ. ಕಳೆದ ವರ್ಷ ಕಂಬಳಕ್ಕೆ ರಾಜ್ಯ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು ಬೇಸರ ವ್ಯಕ್ತಪಡಿಸಿದ್ದರು.ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲೂ ಕರಾವಳಿಯ ಶಾಸಕರು ಬೇಡಿಕೆ ಸಲ್ಲಿಸಿದರು.

ಸ್ವತಃ ಸ್ಪೀಕರ್ ಯುಟಿ ಖಾದರ್  ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಚಾಟಿ ಬೀಸಿದ್ದರು. ಯು.ಟಿ.ಖಾದರ್ ಚಾಟಿ ಬೀಸಿದ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಆದೇಶ ನೀಡಿದ್ದಾರೆ.

ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಆದೇಶ ನೀಡಿದ್ದು,  2024- 25 ನೇ ಸಾಲಿನ 24 ಜೋಡು ಕರೆ ಕಂಬಳಗಳಿಗೆ ತಲಾ 5 ಲಕ್ಷ ರೂ. ಸರ್ಕಾರದ ಆದೇಶದಿಂದ ಕಂಬಳ ಪ್ರೀಯರಲ್ಲಿ ಹರ್ಷ ಉಂಟಾಗಿದೆ.

Category
ಕರಾವಳಿ ತರಂಗಿಣಿ