ಮಂಗಳೂರು: ಇಂದು ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೋಹತ್ಯೆ ಮಾಡಿ ಮಾಂಸ ಮಾಡಿ ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದವರನ್ನು ಸ್ಥಳೀಯರು ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ, ವಾಹನ ಚಾಲಕ ಕುಪ್ಪೆಪದವಿನ ಅಂಡೇಲ್ ನ ನಿವಾಸಿಯಾದ ಅಜೀಜ್ ಹಿಂದೆಯೂ ಗೋಹತ್ಯೆ ಪ್ರಕರಣದಲ್ಲಿ ಭಾಗಿಯಾದವ ಹಾಗಾಗಿ ಗೋಹತ್ಯೆ ಮಾಡಿದ ಸ್ಥಳವನ್ನು ಮತ್ತು ಸಾಗಾಟಮಾಡಿದ ವಾಹನವನ್ನು ಮುಟ್ಟುಗೋಲು ಹಾಕಿ, ಈ ಪ್ರಕರಣವನ್ನು ತನಿಖೆ ಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು, ಅಲ್ಲದೆ ಮಂಗಳೂರು ಸೇರಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಗೋಹತ್ಯೆ ಮತ್ತು ಅಕ್ರಮ ಗೋಸಾಗಾಟ ನಡೆಯುತ್ತಿದ್ದು, ಸುರತ್ಕಲ್ ವ್ಯಾಪ್ತಿಯಲ್ಲಿ ದ್ವಿಚಕ್ರವಾಹನದಲ್ಲಿ ಕರುವನ್ನು ಸಾಗಾಟ ಮಾಡುತ್ತಿರುವ ಮಾಹಿತಿ ಬಂದಿದ್ದು, ಜಿಲ್ಲೆಯಲ್ಲಿ ಗೋ ಸಾಗಾಟ ಮತ್ತು ಗೋಹತ್ಯೆ ನಿರಂತರವಾಗಿ ನಡೆಯುತ್ತಿದ್ದು ಗಾಟ ಮತ್ತು ಗೋಹತ್ಯೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬಜರಂಗದಳ ಪ್ರಾಂತ ಸಹಸಂಯೋಜಕ್ ಭುಜಂಗ ಕುಲಾಲ್ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.