image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು: ಮೂವರ ದುರ್ಮರಣ

ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು: ಮೂವರ ದುರ್ಮರಣ

ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳಾಗಿದ್ದು,   ಜಟ್ಟಿಪಳ್ಳದ ಕಾನತ್ತಿಲ ನಿವಾಸಿ ಅಣ್ಣು ನಾಯ್ಕ ಮತ್ತು ಅವರ ಪುತ್ರ ಚಿಕ್ಕಮಗಳೂರು ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧಿಕಾರಿ ಚಿದಾನಂದ ನಾಯ್ಕ ಮತ್ತು ಸಂಬಂಧಿ ರಮೇಶ್ ನಾಯ್ಕ್ ಮೃತಪಟ್ಟವರಾಗಿದ್ದಾರೆ.ಮೃತಹೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದದು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Category
ಕರಾವಳಿ ತರಂಗಿಣಿ