image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅರ್ಕುಳದಲ್ಲಿ ರಸ್ತೆ ಅಪಘಾತ: ವಿಟ್ಲದ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಅರ್ಕುಳದಲ್ಲಿ ರಸ್ತೆ ಅಪಘಾತ: ವಿಟ್ಲದ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಮಂಗಳೂರು: ಅರ್ಕುಳ ಬಳಿ ರಸ್ತೆ ಅಪಘಾತದಲ್ಲಿ ವಿಟ್ಲದ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.ವಿಟ್ಲ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರವೀತ್ ಕುಮಾ‌ರ್ (22) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದ್ದು, ಅರ್ಕುಳ ಸಮೀಪ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದು, ಈ ವೇಳೆ ಐಸ್ ಕ್ರೀಮ್ ಸಾಗಿಸುತ್ತಿದ್ದ ವಾಹನ ಯುವಕನ ಮೇಲೆ ಹರಿದಿದೆ. ಈ ವೇಳೆ ಗಂಭೀರ ಗಾಯಗೊಂಡ ಪ್ರವೀತ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಠಾಣೆಯ ಪೊಲೀಸರು ಆಗಮಿಸಿದ್ದು, ಈ ಬಗ್ಗೆ ತನಿಖೆ ನಡೆಸುತಿದ್ದಾರೆ

Category
ಕರಾವಳಿ ತರಂಗಿಣಿ