image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜ.10 ರಂದು ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆ

ಜ.10 ರಂದು ಡೊಂಗರಕೇರಿ ವೆಂಕಟರಮಣ ದೇವಳದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆ

ಮಂಗಳೂರು: ಡೊಂಗರಕೇರಿ ವೆಂಕಟರಮಣ ದೇವಸ್ಥಾನದಲ್ಲಿ ಜನವರಿ 10ರಂದು ಏಳನೇ ವರ್ಷದ ಏಕಾದಶಿಯನ್ನು ಅದ್ಧೂರಿಯಿಂದ ಆಚರಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ದೇವಸ್ಥಾನದ ಮ್ಯಾನೇಜಿಂಗ್ ಟ್ರಷ್ಟಿ ಪ್ರವೀಣ್ ನಾಗ್ವೇಕರ್ ಬೋಳಾರ್ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು. ಇಲ್ಲಿ ನಡೆಯುವ ಏಕಾದಶಿ ಕಾರ್ಯಕ್ರಮ ದೇವರ ಅಪ್ಪಣೆಯಂತೆ ನಡೆಯುತ್ತಿದ್ದು ಪ್ರತೀ ಬಾರಿಯಂತೆ ಈ ಬಾರಿಯೂ ವಿಜೃಂಭಣೆಯಿಂದ ಆಚರಿಸಲಾಗುವುದು. ಅಂದು ಲೋಕ ಕಲ್ಯಾಣಕ್ಕಾಗಿ ನಾಮತ್ರಯ ಮಹಾಮಂತ್ರ ಜಪಯಜ್ಞ, ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 4 ಗಂಟೆಗೆ ಡೊಂಗರಕೇರಿ ಕಟ್ಟೆಯಿಂದ ಪುಷ್ಪಯಾಗದ ಹೂವಿನ ವಿಶೇಷ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಉಸ್ತುವಾರಿ ಗಣೇಶ್ ನಾಗ್ವೇಕರ್ ಬೋಳಾರ್ ಮಾತಾಡಿ  ಬೆಳಿಗ್ಗೆ 7ರಿಂದ 8ರವರೆಗೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1ರಿಂದ 3ರವರೆಗೆ ಭಜನಾ ಕಾರ್ಯಕ್ರಮ, ರಾತ್ರಿ 9ಕ್ಕೆ ದೀಪಾರಾಧನೆ ಮಹಾಪೂಜೆ ಬಳಿಕ 10 ಗಂಟೆಗೆ ಪ್ರಸಾದ ವಿತರಣೆ ನಡೆಯಲಿದೆ.  ಅದರೊಂದಿಗೆ  ಜನರಲ್ಲಿ ಸಾವಯವ ಮತ್ತು ಆಯುರ್ವೇದ ಸಸ್ಯಗಳ ಬಳಕೆಯ ಬಗ್ಗೆ ಆಸಕ್ತಿ ಮೂಡಿಸಲು ಈ ಬಾರಿ ದೇವಳವನ್ನು ವಿಶೇಷವಾಗಿ ಸಾವಯವ ಸಸ್ಯಗಳಿಂದ ಅಲಂಕಾರ ಮಾಡಲಾಗುತ್ತದೆ.   ಭಕ್ತರಿಗೆ ಪ್ರಸಾದ ರೂಪದಲ್ಲಿ ಸಸ್ಯವನ್ನು ನೀಡಲು ದೇವಳದ ಆಡಳಿತ ಮಂಡಳಿ ನಿರ್ಧರಿಸಿದ್ದು, ಅಲಂಕಾರದಲ್ಲಿ ಪಾಲಕ್, ಹರಿವೆ, ಕೆಂಪು ಕಾಮಕಸ್ತೂರಿ, ಬಿಳಿ ಕಾಮಕಸ್ತೂರಿ ಗಿಡಗಳನ್ನು ಬಳಸಲಾಗಿದೆ. ಸರಿ ಸುಮಾರು 10000ಕ್ಕೂ ಹೆಚ್ಚು ಗಿಡಗಳನ್ನು ಬೆಳೆಸಲಾಗಿದೆ. 8000 ತುಳಸಿ ಗಿಡಗಳನ್ನು ಭಕ್ತರಿಗೆ ನೀಡಲು ಬೆಳೆಸಲಾಗಿದೆ ಎಂದರು. 

ಈ ಸಂದರ್ಭದಲ್ಲಿ ವಿನಾಯಕ ಶೇಟ್, ಸಾಯಿದತ್ ನಾಯಕ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ