image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರೋಝ್ ಫ್ರೆಂಡ್ಸ್ ಕ್ಲಬ್ (ರಿ.) ಕಳಸಗುರಿ ಸಂಸ್ಥೆಯ 30ನೇ ವಾರ್ಷಿಕೋತ್ಸವ ಪ್ರಯುಕ್ತ ಸೌಹಾರ್ದ ಸಂಗಮ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ರೋಝ್ ಫ್ರೆಂಡ್ಸ್ ಕ್ಲಬ್ (ರಿ.) ಕಳಸಗುರಿ ಸಂಸ್ಥೆಯ 30ನೇ ವಾರ್ಷಿಕೋತ್ಸವ ಪ್ರಯುಕ್ತ ಸೌಹಾರ್ದ ಸಂಗಮ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಅಡ್ಡೂರು: ರೋಝ್ ಫ್ರೆಂಡ್ಸ್ ಕ್ಲಬ್ (ರಿ.) ಕಳಸಗುರಿ ಸಂಸ್ಥೆಯ 30ನೇ ವಾರ್ಷಿಕೋತ್ಸವ ಪ್ರಯುಕ್ತ ಸೌಹಾರ್ದ ಸಂಗಮ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಹೊನಲು ಬೆಳಕಿನ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ ಜ.11 ರಂದು ಇಲ್ಲಿನ ಕಳಸಗುರಿ ಮೈದಾನದಲ್ಲಿ ಜರುಗಲಿದೆ. 

ಅಂದು ಸಂಜೆ 4.30ಕ್ಕೆ ರೋಝ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಅಬೂಬಕ್ಕರ್ ಸಿದ್ದೀಕ್ ಕಳಸಗುರಿ ಧ್ವಜಾರೋಹಣ ನೆರವೇರಿಸಲಿದ್ದಾರೆ.  ಸಂಜೆ 7ಕ್ಕೆ ನಡೆಯಲಿರುವ ಸೌಹಾರ್ದ ಸಂಗಮ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಾಜಿ ಎಂ.ಎಚ್.ಹಾಜಿ ಮೊಹಿಯುದ್ದೀನ್ ಉದ್ಘಾಟಿಸಲಿದ್ದು, ಆರ್.ಎಫ್.ಸಿ ಗೌರವಾಧ್ಯಕ್ಷ ಜಬ್ಬಾರ್ ಕಳಸಗುರಿ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಬಿ.ರಮಾನಾಥ ರೈ ಉಪಸ್ಥಿತರಿರಲಿದ್ದಾರೆ. ಬಳಿಕ ಸೂಪರ್ ಸಿಕ್ಸ್ ಕಿಕ್ರೆಟ್ ಪಂದ್ಯಾಟವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಉದ್ಘಾಟಿಸಲಿದ್ದಾರೆ ಎಂದು ಸಂಸ್ಥೆಯ ವಕ್ತಾರ ಇರ್ಝಾನ್ ಅಡ್ಡೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ