image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜ.11- 12ರಂದು ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ "ಬೀಚ್ ಉತ್ಸವ"

ಜ.11- 12ರಂದು ತಣ್ಣೀರುಬಾವಿ ಕಡಲ ಕಿನಾರೆಯಲ್ಲಿ "ಬೀಚ್ ಉತ್ಸವ"

ಮಂಗಳೂರು: ಕರಾವಳಿ ಉತ್ಸವದ ಪ್ರಯುಕ್ತ ಜಿಲ್ಲಾಡಳಿತ,  ಮುಡಾ, ಎನ್‌ಎಂಪಿಟಿ ಹಾಗೂ ರೋಹನ್ ಕಾರ್ಪೊರೇಶನ್‌ ಸಹಭಾಗಿತ್ವದಲ್ಲಿ ಆಯೋಜಿಸಿದ್ದ 'ಬೀಚ್ ಉತ್ಸವ" ಮಾಜಿ ಪ್ರದಾನಿ ಮನಮೋಹನ್ ಸಿಂಗ್ ಸಾವಿನಿಂದ ಮುಂದೂಡಲ್ಪಟ್ಟಿತ್ತು. ಈಗ ತಣ್ಣೀರುಬಾವಿಯಲ್ಲಿ  ಜ.11 ಮತ್ತು 12ರಂದ ಮರು ನಿಗದಿಪಡಿಸಲಾಗಿದೆ ಎಂದು ಬೀಚ್ ಉತ್ಸವ ಸಮಿತಿಯ ಅಧ್ಯಕ್ಷ, ಮಂಗಳೂರು ಪೊಲೀಸ್‌ ಕಮಿಷನ‌ರ್ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಜ.11ರಂದು ಸಂಜೆ ಉತ್ಸವಕ್ಕೆ ಚಾಲನೆ ದೊರೆಯಲಿದ್ದು, 6 ಗಂಟೆಗೆ ನೃತ್ಯ ಉತ್ಸವ ಆಯೋಜಿಸಲಾಗಿದೆ. ಬಳಿಕ ಕದ್ರಿ ಮಣಿಕಾಂತ್ ಕದ್ರಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಜ.12ರಂದು ಬೆಳಗ್ಗೆ 5:30ಕ್ಕೆ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದಿಂದ ಯೋಗ ಕಾರ್ಯಕ್ರಮದೊಂದಿಗೆ ಪ್ರಾರಂಭವಾಗಿ 6:30ಕ್ಕೆ ಉದಯರಾಗ, 9ರಿಂದ ಜಲಕ್ರೀಡೆಗಳು ನೆಡೆಯಲಿದೆ. 9:30ಕ್ಕೆ ಮರಳು ಶಿಲ್ಪ ಸ್ಪರ್ಧೆ ನಡೆಯಲಿದ್ದು, ಸಂಜೆ 5:30ಕ್ಕೆ ನೃತ್ಯೋತ್ಸವ, 6:30ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಬಳಿಕ ರಘು ದೀಕ್ಷಿತ್ ರಿಂದ ಲೈವ್ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಅವರು ವಿವರ ನೀಡಿದರು.

Category
ಕರಾವಳಿ ತರಂಗಿಣಿ