image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಅವರಿಗೆ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರಿಂದ ಅಭಿನಂದನೆ

ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಅವರಿಗೆ ಡಾ. ಎಂ. ಎನ್. ರಾಜೇಂದ್ರ ಕುಮಾರ್ ರಿಂದ ಅಭಿನಂದನೆ

ಮಂಗಳೂರು-ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳಿಗೆ ಮಾರ್ಗದರ್ಶನ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಇದರ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಹಾಗೂ ಉಪಾಧ್ಯಕ್ಷರಾದ ನೀಲಯ ಎಂ ಅಗರಿ ಯವರನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಂಡಳ ಹಾಗೂ  ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅಭಿನಂದಿಸಿದ್ದಾರೆ.

 ಎಸ್ ಸಿಡಿಸಿಸಿ ಬ್ಯಾಂಕಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಸಹಕಾರ ಕ್ಷೇತ್ರದಲ್ಲಿ ಶಿಕ್ಷಣ, ತರಬೇತಿ ಹಾಗೂ ಪ್ರಚಾರಕ್ಕೆ ಹೆಚ್ಚು ಒತ್ತು ನೀಡಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ನೂತನ ಅಧ್ಯಕ್ಷ ಶಶಿಕುಮಾರ್ ರೈ ಅವರ ಸಾರಥ್ಯದಲ್ಲಿ ಇನ್ನಷ್ಟೂ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸಿ ರಾಜ್ಯದ ಇತರ ಜಿಲ್ಲಾ ಸಹಕಾರಿ ಯೂನಿಯನ್ ಗಳಿಗೆ ಮಾದರಿಯಾಗಲಿ ಎಂದು ಶುಭ ಆಶಿಸಿದರು.

ಅಭಿನಂದನೆಯನ್ನು ಸ್ವೀಕರಿಸಿ ಶಶಿಕುಮಾರ್ ರೈ ಮಾತನಾಡಿ, ಜಿಲ್ಲಾ ಮಟ್ಟದ ಸಹಕಾರಿ ಸಂಸ್ಥೆಯೊಂದನ್ನು ಮುನ್ನಡೆಸುವ ಸುಯೋಗವನ್ನು ನಮ್ಮ ಮಾರ್ಗದರ್ಶಕರಾದ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಕಲ್ಪಿಸಿಕೊಟ್ಟಿದ್ದಾರೆ. ಹಾಗಾಗಿ ನನ್ನ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಅವರ ವಿಶ್ವಾಸವನ್ನು ಉಳಿಸಿಕೊಂಡು, ಅವರ ಮಾರ್ಗದರ್ಶನದಲ್ಲೇ ಮಾದರಿ ಕಾರ್ಯಕ್ರಮಗಳನ್ನು ರೂಪಿಸಿ ಸಹಕಾರಿ ಯೂನಿಯನ್ ನ್ನು ಮುನ್ನಡೆಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್. ಎನ್,  ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಸುಧೀರ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾದ ಬಿ. ಪದ್ಮಶೇಖರ್ ಜೈನ್,  ಡಾ. ಎಸ್. ಆರ್. ಹರೀಶ್ ಆಚಾರ್ಯ, ಚಿತ್ತರಂಜನ್ ಬೋಳಾರ್, ವಿಷ್ಣು ಭಟ್ ಬಿ.  ಸತೀಶ್ ಕೆ., ಜೊಯ್ಲಸ್ ವಿಲ್ಫ್ರೇಡ್ ಡಿ' ಸೋಜ,  ಸುಧಾಕರ ಪಿ. ಶೆಟ್ಟಿ,  ಮಂಜುನಾಥ್ ಎನ್. ಎಸ್,  ಸವಿತಾ ಎನ್. ಶೆಟ್ಟಿ,  ಕೆ. ಸಂಜೀವ ಪೂಜಾರಿ, ಪ್ರವೀಣ್ ಗಿಲ್ಬರ್ಟ್ ಪಿಂಟೊ,  ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ