ಮಂಗಳೂರು: ಹನ್ನೆರಡು ವರ್ಷಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದ ಬಳಿಯ ಕಾಡಂಚಿನಲ್ಲಿ ಅತ್ಯಾಚಾರಕ್ಕೊಳಗಾಗಿ ಭೀಕರವಾಗಿ ಹತ್ಯೆಯಾಗಿದ್ದ ಕುಮಾರಿ ಸೌಜನ್ಯ ಅವರ ತಂದೆ ಇಂದು ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಚಂದಪ್ಪ ಗೌಡ (58)ರವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ವೃತ್ತಿಯಲ್ಲಿ ಗುತ್ತಿಗೆದಾರರಾಗಿದ್ದ ಚಂದಪ್ಪ ಗೌಡರವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.
ಮೃತರು ತಂದೆ ಪೊಣಿ ಗೌಡ, ಪತ್ನಿ ಕುಸುಮಾವತಿ, ಮಕ್ಕಳಾದ ಸೌಮ್ಯ, ಸೌಂದರ್ಯ, ಸೌವರ್ಧ, ಜಯರಾಮರನ್ನು ಅಗಲಿದ್ದಾರೆ.