ಮಂಗಳೂರು: ನಗರದ ಕೊಟ್ಟಾರದಲ್ಲಿರುವ ಮಹಾದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಬಳಿ ರಣಕಾಳಿ ಹಾಗೂ ಬ್ರಹ್ಮರಾಕ್ಷಸ ಅನ್ಯಪ್ರೇತ ಉಚ್ಚಾಟನೆ ಹಿನ್ನೆಲೆ ಕೊಟ್ಟಾರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮಾಡದಂತೆ ಸೂಚಿಸಿ ಬ್ಯಾನರ್ ಅಳವಡಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 3 ಗಂಟೆಯವರೆಗೆ ಜನರು ಓಡಾಡದಂತೆ ಮನವಿ ಮಾಡಲಾಗಿದ್ದು, ಸದ್ಯ ಪ್ರೇತ ಉಚ್ಚಾಟನೆ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ದೈವಸ್ಥಾನ ಜೀರ್ಣೋದ್ದಾರ ಮಾಡುವ ಸಲುವಾಗಿ ತಾಂಬೂಲ ಪ್ರಶ್ನೆ ಕೇಳಲಾಯಿತು. ಆಗ ಈ ಪ್ರದೇಶದಲ್ಲಿ ರಾಕ್ಷಸ, ಪ್ರೇತಾತ್ಮಗಳಿರುವುದು ಕಂಡು ಬಂದಿತ್ತು.ದೈವಸ್ಥಾನದ ಜೀರ್ಣೋದ್ಧಾರಕ್ಕೂ ಮೊದಲು ಈ ಪ್ರೇತಾತ್ಮಗಳ ಉಚ್ಚಾಟನೆ ಆಗಬೇಕು ಎಂದು ಬಂದಿತ್ತು. ಹಾಗಾಗಿ ಇಂದು ಅಮವಾಸ್ಯೆ ರಾತ್ರಿ 12 ಗಂಟೆ ವೇಳೆಗೆ ಪ್ರೇತಾತ್ಮ ಉಚ್ಚಾಟಣೆ ನಡೆಯಲಿದೆ. ಆಗ ಸುತ್ತಮುತ್ತ ಉಚ್ಚಾಟನೆ ವಿಧಿ ವಿಧಾನ ನಡೆಯುತ್ತೆ ಎನ್ನಲಾಗಿದ್ದು, ಈ ಬಗ್ಗೆ ಮಂಗಳೂರು ಪೊಲೀಸ್ ಇಲಾಖೆಗೂ ಆಯೋಜಕರು ಮನವಿ ಮಾಡಿದ್ದಾರೆ. ಸುಮಾರು 3-4 ಕಿಮೀ ವ್ಯಾಪ್ತಿಯ ರಸ್ತೆಯಲ್ಲಿ ವಾಹನ ಹಾಗೂ ಜನ ಸಂಚಾರವನ್ನು ನಿಷೇಧಿಸಲಾಗಿದೆ. ಮಧ್ಯರಾತ್ರಿ ಸುಮಾರು ಐದು ಗಂಟೆಗಳ ಕಾಲ ಮಂಗಳೂರಿನ ಪ್ರಮುಖ ರಸ್ತೆಯಾದ ಕೊಟ್ಟಾರ ಬಂದ್ ಆಗಲಿದೆ.