image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರಂಭದ ಉದ್ಘಾಟನೆ

ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಶತಮಾನೋತ್ಸವ ಸಮಾರಂಭದ ಉದ್ಘಾಟನೆ

ಮಂಗಳೂರು: ಎಸ್.ಎಸ್.ವಿ.ಪಿ. ಎಂದು ಜನಪ್ರಿಯವಾಗಿರುವ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ, ಮಂಗಳೂರು ಕ್ಯಾಥೊಲಿಕ್ ಧರ್ಮಸಭೆಯಲ್ಲಿ ತನ್ನ ಅಸ್ತಿತ್ವದ ನೂರು ವರ್ಷಗಳ ಸಂಭ್ರಮವನ್ನು ಆಚರಿಸುತ್ತಿದ್ದು, ಇದೇ 2025ರ ಫೆಬ್ರವರಿ 9ರ ಭಾನುವಾರದಂದು ಬಿಜೈ ಚರ್ಚ್ ಸಭಾಂಗಣದಲ್ಲಿ ಶತಮಾನೋತ್ಸವದ ಉದ್ಘಾಟನೆ ನೆರವೇರಲಿದೆ ಎಂದು ಸೆಂಟ್ರಲ್ ಕೌನ್ಸಿಲ್ ಅಧ್ಯಕ್ಷ ಜ್ಯೋ ಕುವೆಲ್ಲೋ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಮಂಗಳೂರು ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಞರ್ ಅತೀ ವಂದನೀಯ ಫಾ| ಮ್ಯಾಕ್ಸಿಮ್ ನೊರೊನ್ಹಾರವರು ಶತಮಾನೋತ್ಸವದ ಲಾಂಛನವನ್ನು ಬಿಡುಗಡೆ ಮಾಡಲಿದ್ದಾರೆ. ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ ಆಧ್ಯಾತ್ಮಿಕ ಸಲಹೆಗಾರ ವಂದನೀಯ ಫಾ| ಫ್ರಾನ್ಸಿಸ್ ಡಿಸೋಜಾರವರು ಶತಮಾನೋತ್ಸವದ ಘೋಷಣಾ ವಾಕ್ಯವನ್ನು ಬಿಡುಗಡೆ ಮಾಡುವರು. ಬಿಜೈ ಚರ್ಚ್ನ ಧರ್ಮಗುರು ವಂದನೀಯ ಫಾ| ಡಾ| ಜೆ.ಬಿ.ಸಲ್ಡಾನ್ಹಾ ಇವರು ಶತಮಾನೋತ್ಸವದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪಶ್ಚಿಮ ಭಾರತದ ಪ್ರಾದೇಶಿಕ ಮಂಡಳಿಯ ಸಂಯೋಜಕ ಬ್ರ|  ವಾಲ್ಟರ್ ಮಾರ್ಟಿಸ್, ಸೆಂಟ್ರಲ್ ಕೌನ್ಸಿಲ್ ಇದರ ಮಾಜಿ ಅಧ್ಯಕ್ಷ ಬ್ರ| ಗಿಲ್ಬರ್ಟ್ ಪಿಂಟೊ, ಸೆಂಟ್ರಲ್ ಕೌನ್ಸಿಲ್ ಹಾಲಿ ಅಧ್ಯಕ್ಷ ಬ್ರ| ಜ್ಯೋ ಕುವೆಲ್ಲೊ ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ. 

ವಿಶ್ವದ ಅತಿ ದೊಡ್ಡ ಕ್ಯಾಥೊಲಿಕ್ ಸಮಾನ ಮನಸ್ಕ ಸೇವಾ ಸಂಸ್ಥೆಯಾದ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ ಮಂಗಳೂರಿನ ಬೆಂದೂರ್ ಚರ್ಚ್ ನಲ್ಲಿ ಜನವರಿ 1926ರಲ್ಲಿ ಅಸ್ತಿತ್ವಕ್ಕೆ ಬಂತು. ಅದೇ ತಿಂಗಳಲ್ಲಿ ಮಿಲಾಗ್ರಿಸ್ ಘಟಕದ ಸ್ಥಾಪನೆಯಾಯಿತು. ನಂತರ 1926 ಇಸವಿಯ ಮೇ ತಿಂಗಳಲ್ಲಿ ಇನ್ನೂ ಎರಡು ಘಟಕಗಳು ರೊಸಾರಿಯೊ ಕೆಥಡ್ರಾಲ್ ಮತ್ತು ಬಿಜೈ ಚರ್ಚ್ ನಲ್ಲಿ ಅಸ್ತಿತ್ವಕ್ಕೆ ಬಂದವು. 

ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ ಪ್ರಮುಖ ಸೇವಾ ಕೆಲಸವೆಂದರೆ ಬಡವರು ಮತ್ತು ನಿರ್ಗತಿಕರನ್ನು ಬೇಟಿಯಾಗುವುದು ಮತ್ತು ಅವರಿಗೆ ತಮ್ಮದೇ ಪರಿಸರದಲ್ಲಿ ಪರಿಹಾರವನ್ನು ವಿತರಿಸುವುದು. ಹೀಗೆ ಪರಿಹಾರವನ್ನು ವಿತರಿಸುವಾಗ ಎಸ್.ಎಸ್.ವಿ.ಪಿ. ಅವರ ಆತ್ಮಗೌರವ ಮತ್ತು ಅನಾಮಧೇಯತೆಯನ್ನು ರಕ್ಷಿಸುವ ಕೆಲಸ ಮಾಡುತ್ತದೆ. ಪ್ರತೀ ಘಟಕವು ತಮ್ಮ ಪರಿಸರದಲ್ಲಿ ಕನಿಷ್ಠ 5 ಕುಟಂಬಗಳನ್ನು ದತ್ತು ಪಡೆದು ಅವರನ್ನು ತಮ್ಮದೇ ಕುಟುಂಬದ ಸದಸ್ಯರಂತೆ ನೋಡಿಕೊಳ್ಳುತ್ತಾರೆ. 

ಇಂದು ಮಂಗಳೂರು ಸೆಂಟ್ರಲ್ ಕೌನ್ಸಿಲ್ ಇದರ ಆಶ್ರಯದಲ್ಲಿ ಸೇವೆ ಮಾಡುವ ಘಟಕಗಳು, 623 ದತ್ತು ಕುಟಂಬಗಳನ್ನು ಹಾಗೂ 1765 ಕುಟಂಬದ ಸದಸ್ಯರನ್ನು ಹೊಂದಿದೆ. 1926 ಇಸವಿಯಲ್ಲಿ ಸೈಂಟ್ ವಿನ್ಸೆಂಟ್  ಡಿ ಪಾವ್ಲ್ ಸೊಸೈಟಿ ಮಂಗಳೂರಿನಲ್ಲಿ ಅಸ್ತಿತ್ವಗೊಂಡ ಮೇಲೆ ಅದು ಇಡೀ ಮಂಗಳೂರು ಧರ್ಮಪ್ರಾಂತ್ಯಕ್ಕೆಹರಡಿದೆ. ಇಂದು ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿಯ 111 ಘಟಕಗಳು ಮತ್ತು 3 ಯುವ ಘಟಕಗಳು ಸಕ್ರೀಯವಾಗಿವೆ. 1539 ಸದಸ್ಯ ಬಲ ಹೊಂದಿರುವ ಎಸ್.ಎಸ್.ವಿ.ಪಿ. ಬಡವರ ಸೇವೆಯಲ್ಲಿ ಯಾವುದೇ ಪ್ರಚಾರವಿಲ್ಲದೆ ತೊಡಗಿಸಿಕೊಂಡಿದೆ. ಪ್ರಸ್ತುತ ಎಸ್.ಎಸ್.ವಿ.ಪಿ.ಯ ವಜ್ರಮಹೋತ್ಸವ ಆರೋಗ್ಯ ಯೋಜನೆ ತುಂಬಾ ಜನಪ್ರಿಯವಾಗಿದೆ. ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜ್ ಆಸ್ಪತ್ರೆ, ಮಂಗಳೂರು ಮತ್ತು ತುಂಬೆ ಇವರ ಸಹಯೋಗದೊಂದಿಗೆ ಈ ಯೋಜನೆಯನ್ನು ಕಾರ್ಯಗತಗೊಳಿಸಲಾಗಿದೆ. ಈ ಯೋಜನೆಯು ದತ್ತು ಪಡೆದ ಕುಟುಂಬಗಳ ಸದಸ್ಯರಿಗೆ ಉಚಿತ ವೈದ್ಯಕೀಯ ಮತ್ತು ಡಯಾಲಿಸಿಸ್ ಆರೈಕೆಯನ್ನು ಒದಗಿಸುತ್ತದೆ. 

ಶತಮಾನೋತ್ಸವದ ಸವಿನೆನಪಿಗಾಗಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಸೊಸೈಟಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳಲ್ಲಿ ಪ್ರಮುಖ ಯೋಜನೆಗಳೆಂದರೆ, ಎಸ್.ಎಸ್.ವಿ.ಪಿ.ಯ ದತ್ತು ಕುಟಂಬಗಳ ಸುಮಾರು 405 ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು. ಆಸ್ರೊ - ನೂರು ಕುಟಂಬಗಳಿಗೆ ತಮ್ಮ ಮನೆಗಳನ್ನು ನಿರ್ಮಿಸಲು ಅಥವಾ ದುರಸ್ತಿ ಮಾಡಲು ಧನ ಸಹಾಯ ಮಾಡಲಿದೆ ಎಂದರು. 

ಪ್ರತಿಕಾಗೋಷ್ಠಿಯಲ್ಲಿ ಲಿಗೊರಿ ಫೆರ್ನಾಂಡಿಸ್ ,ಕ್ಲೆರೆನ್ಸ್ ಮಚಾದೊ, ಶ್ರೀಮತಿ ಫಿಲೋಮಿನಾ ಮಿನೆಜೆಸ್, ಲೊಯ್ಡ್ ರೇಗೊ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ