ಮಂಗಳೂರು: ಕೇಂದ್ರ ಪುರಸ್ಕಂತ ಕಾರ್ಯಕ್ರಮಗಳ ಅನುಷ್ಠಾನದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ಫೆಬ್ರವರಿ 14 ರಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.