image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾಪು ಕ್ಷೇತ್ರಕ್ಕೆ ದಕ್ಷಿಣ ವಾಹಿನಿಯಿಂದ ಫೆ. 22ರಂದು ಹೊರೆಕಾಣಿಕೆ

ಕಾಪು ಕ್ಷೇತ್ರಕ್ಕೆ ದಕ್ಷಿಣ ವಾಹಿನಿಯಿಂದ ಫೆ. 22ರಂದು ಹೊರೆಕಾಣಿಕೆ

ಮಂಗಳೂರು: ಕಾಪು ಶ್ರೀ ಹೊಸಮಾರಿಗುಡಿ ಶ್ರೀ ಮಾರಿಯಮ್ಮನ ಪುನಃಪ್ರತಿಷ್ಠಾಪನಾ ಸಹಸ್ರ ಕುಂಭಾಭಿಷೇಕ ಅಂಗವಾಗಿ ದಕ್ಷಿಣ ವಾಹಿನಿ (ದಕ್ಷಿಣ ಕನ್ನಡ ಜಿಲ್ಲೆ) ಹಸಿರುವಾಣಿ ಹೊರೆಕಾಣಿಕೆ ಫೆ.22ರಂದು ಆಯೋಜಿಸಲಾಗಿದೆ. ಬ್ರಹ್ಮಕಲಶೋತ್ಸವ ಹಾಗೂ ಹೊರೆಕಾಣಿಕೆ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸೋಣ ಎಂದು ಹಸಿರುವಾಣಿ ಹೊರೆ ಕಾಣಿಕೆ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಹೇಳಿದರು.

ಕಾಪು ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ ಅಂಗವಾಗಿ ಸೋಮವಾರ  ಬಂಟ್ಸ್‌ ಹಾಸ್ಟೆಲ್ ನಲ್ಲಿ ನಡೆದ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಧಾರ್ಮಿಕ ಮುಖಂಡ, ಮಾಜಿ ಸಚಿವ ಬಿ. ನಾಗರಾಜ್ ಶೆಟ್ಟಿ ಮಾತನಾಡಿ, ತುಳುನಾಡಿನಲ್ಲಿ ಜನಿಸಿದ ನಾವೆಲ್ಲರೂ ಪುಣ್ಯಾತ್ಮರು. ಕಾಪು ಶ್ರೀಹೊಸಮಾರಿಗುಡಿ ಬ್ರಹ್ಮಕಲಶೋತ್ಸವದಲ್ಲಿ ನಾವೆಲ್ಲರೂ ಭಾಗಿಯಾಗೋಣ. ಆ ಪುಣ್ಯ ಕಾರ್ಯಕ್ರಮದಲ್ಲಿ ನಮ್ಮಿಂದ ಯಾವ ರೀತಿ ಸೇವೆ ಮಾಡಲು ಸಾಧ್ಯವೋ ಆ ರೀತಿ ತೊಡಗಿಸಿಕೊಳ್ಳೋಣ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪ್ರಧಾನ ಸಂಚಾಲಕ ಚಂದ್ರಹಾಸ್ ಡಿ. ಶೆಟ್ಟಿ ಮಾತನಾಡಿ, ಹೊರೆಕಾಣಿಕೆಗೆ ಸಂಬಂಧಪಟ್ಟಂತೆ ಆಯಾಯ ತಾಲೂಕು, ವಲಯ, ಗ್ರಾಮ ಮಟ್ಟದಲ್ಲಿ ಸಮಿತಿ ರಚಿಸಲಾ ಗಿದ್ದು, ಹೊರೆಕಾಣಿಕೆ ಸಮರ್ಪಣೆ ಮಾಡಬಹುದಾದ ವಸ್ತುಗಳ ಪಟ್ಟಿಯನ್ನು ಈಗಾಗಲೇ ನೀಡಲಾಗಿದೆ. ಅದರಂತೆ ಭಕ್ತಾದಿಗಳು ಹೊರೆ ಕಾಣಿಕೆ ನೀಡಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದರು.

ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸದಸ್ಯ ಗಂಗಾಧರ್ ಸುವರ್ಣ, ಸುರೇಶ್ಚಂದ್ರ ಶೆಟ್ಟಿ, ಕರುಣಾಕರ ಶೆಟ್ಟಿ, ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಕೆ.ಟಿ. ಸುವರ್ಣ, ಗೀತಾಂಜಲಿ ಸುವರ್ಣ. ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ