image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಳಪೆ ಉತ್ತರ ವಾರ್ಡಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್

ಅಳಪೆ ಉತ್ತರ ವಾರ್ಡಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್

ಮಂಗಳೂರು :ಮಹಾನಗರ ಪಾಲಿಕೆ ವ್ಯಾಪ್ತಿಯ 51ನೇ ಅಳಪೆ ಉತ್ತರ ವಾರ್ಡಿನ ಪ್ರಾಥಮಿಕ ಆರೋಗ್ಯ ಕೇಂದ್ರ ಪಡೀಲ್, ಇದರ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನೆರವೇರಿಸಲಾಯಿತು.ನಂತರ ಮಾತನಾಡಿದ ಶಾಸಕರು, ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ಧಿಯ ಅಗತ್ಯತೆಯ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯೆ ರೂಪಶ್ರೀ ಪೂಜಾರಿಯವರು ಅನೇಕ ಬಾರಿ ಪ್ರಸ್ತಾಪಿಸಿದ್ದರು. ಇದೀಗ ಶಾಸಕರ ಅನುದಾನವನ್ನು ಬಳಸಿಕೊಂಡು ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು ಶೀಘ್ರವಾಗಿ ಪೂರ್ಣಗೊಳಿಸಲು ಸಹ ಕ್ರಮ ವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಕಿರಣ್ ರೈ, ಸುರೇಶ್ ಆಚಾರ್, ಮೋಹನ್ ದಾಸ್ ಶೆಟ್ಟಿ, ಜಿತೇಶ್ ಪಡೀಲ್, ಅಶೋಕ್ ಪಡೀಲ್, ಲತಾ ಟೀಚರ್, ರಾಕೇಶ್, ಸುಜಾತ ಮಾರ್ಲ, ಹಾಗೂ ಡಾ.ದಿನೇಶ್ ಸೇರಿದಂತೆ ಆರೋಗ್ಯ ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ