ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದ ಬಲವರ್ಧನೆಗೆ ತನ್ನದೇ ಆದ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು ಬ್ಯಾಂಕಿನ ಬೆಳವಣಿಗೆಯಲ್ಲಿ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ 'ಸಹಕಾರ ರತ್ನ' ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ನಡೆಸಲು ಅವಿಭಜಿತ ಜಿಲ್ಲೆಯ ಸಮಸ್ತ ಸಹಕಾರಿಗಳೆಲ್ಲರೂ ತೀರ್ಮಾನಿಸಿದ್ದೇವೆ ಎಂದು ಐಕಳ ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ದಾರೆ. ಅವರು ದಕ್ಷಿಣ ಕನ್ನಡ ಸಹಕಾರಿ ಬ್ಯಾಂಕ್ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿ, ಫೆಬ್ರವರಿ-24 ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅಂದು ಪೂರ್ವಾಹ್ನ 10.30 ಗಂಟೆಗೆ ಎಸ್ ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದ್ದಾರೆ. ಸಹಕಾರ ಕ್ಷೇತ್ರವನ್ನು ಸದೃಢಗೊಳಿಸುವ ಚಿಂತನೆಯೊಂದಿಗೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿರುವ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸಹಕಾರಿಗಳೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಸಹಕಾರ ಕ್ಷೇತ್ರದ ಬೆಳವಣಿಗೆಗೆ ವಿಶೇಷ ಕಾರ್ಯಯೋಜನೆಯನ್ನು ಆಯೋಜಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬವನ್ನುಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮವು ಈ ಸಂದರ್ಭದಲ್ಲಿ ಆಯೋಜನೆಯಾಗಿದೆ. ಸಹಕಾರ ಕ್ಷೇತ್ರವು ಸರ್ವಧರ್ಮೀಯರ ಕ್ಷೇತ್ರವಾಗಿರುವುದರಿಂದ ಸಮಾಜದ ಎಲ್ಲಾ ವರ್ಗದ ಫಲಾನುಭವಿಗಳನ್ನು ಗುರುತಿಸಿ-ಸವಲತ್ತುಗಳನ್ನು ಈ ಕಾರ್ಯಕ್ರಮದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಯಕ್ರಮವು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು. ಟಿ. ಖಾದರ್ ಫರೀದ್ ಅವರಿಂದ ಉದ್ಘಾಟನೆಗೊಳ್ಳಲಿದ್ದು ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದು, ನಿಟ್ಟೆ ವಿದ್ಯಾಸಂಸ್ಥೆಗಳ ಮಾನ್ಯ ಅಧ್ಯಕ್ಷರಾದ ಶ್ರೀ ಎನ್. ವಿನಯ್ ಹೆಗ್ಡೆ ಅವರು ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಲಿರುವರು. ಉಡುಪಿ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಇವರು ಅಭಿವಂದನಾ ಭಾಷಣ ಮಾಡಲಿರುವರು ಎಂದು ಹೇಳಿದರು.
76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆಯನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರು ನೆರವೇರಿಸಲಿದ್ದು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ ಕಾಮತ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರುಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿವಂದಿಸುವ ಈ ಕಾರ್ಯಕ್ರಮದಲ್ಲಿ ಸಹಕಾರ ಸಂಸ್ಥೆಗಳ ಹೆಚ್ಚಿನ ಪ್ರತಿನಿಧಿಗಳು ಹಾಗೂ ಅವರ ಹಿತೈಷಿಗಳು ಭಾಗವಹಿಸುವಂತೆ ವಿನಂತಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಯಕರ ಶೆಟ್ಟಿ, ಶಶಿಕುಮಾರ್ ರೈ ಬಾಲ್ಯೊಟ್ಟು,ವಿನಯ ಕುಮಾರ್ ಸೂರಿಂಜೆ,ಜಯಕರ ಶೆಟ್ಟಿ ಇಂದ್ರಾಳಿ,ಭಾಸ್ಕರ ಕೋಟ್ಯಾನ್, ಜಯರಾಜ್ ರೈ ಉಪಸ್ಥಿತರಿದ್ದರು.