ಮಂಗಳೂರು: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್‌ಸಿಆರ್ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್‌ಗೆ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಅಭಿನಂದನಾ ಸಮಾರಂಭ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಮಾ.1ರಂದು ಬೆಳಗ್ಗೆ 10.30ಕ್ಕೆ ಪುತ್ತೂರಿನ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಲಿದೆ ಎಂದು ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ಅಭಿನಂದನಾ ಸಮಿತಿ ಅಧ್ಯಕ್ಷ ಎಸ್.ಬಿ.ಜಯರಾಮ ರೈ ತಿಳಿಸಿದ್ದಾರೆ.
ಮಾಜಿ ಸಚಿವ ಬಿ.ರಮಾನಾಥ ರೈ ಸಮಾರಂಭ ಉದ್ಘಾಟಿಸಲಿದ್ದು, ಕರ್ನಾಟಕ ಸರಕಾರದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶ್ಯಾಮ್ ಭಟ್ ಅಭಿವಂದಿಸಲಿದ್ದಾರೆ. ದಕ್ಷಿಣ ಕನ್ನಡ ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅಭಿವಂದನಾ ಭಾಷಣ ಮಾಡಲಿದ್ದಾರೆ. ಸಂಸದ ಕ್ಯಾ.ಬ್ರಿಜೇಶ್ ಚೌಟ ಶುಭಾ ಶಂಸನೆಗೈಯಲಿದ್ದು, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ . ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಮಾಸ್ ಅಧ್ಯಕ್ಷ ಕೆ. ಸೀತಾರಾಮ ರೈ ಸವಣೂರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.