image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಿಗಂತ್‌ ನಾಪತ್ತೆ ಕೇಸ್‌:ಹೈಕೋರ್ಟ್ ನಿಂದ ಪೊಲೀಸರಿಗೆ ಖಡಕ್ ಸೂಚನೆ

ದಿಗಂತ್‌ ನಾಪತ್ತೆ ಕೇಸ್‌:ಹೈಕೋರ್ಟ್ ನಿಂದ ಪೊಲೀಸರಿಗೆ ಖಡಕ್ ಸೂಚನೆ

ಮಂಗಳೂರು: ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ ಹಲವು ದಿನಗಳ ಹುಡುಕಾಟ ನಡೆಸಿದರೂ ಸುಳಿವು ಸಿಗದ ಕಾರಣ, ಅವರ ಪೋಷಕರು ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.ಇದೀಗ ಈ ಕುರಿತು ವಿಚಾರಣೆ ನಡೆಸಿದ ಕೋರ್ಟು ಪೊಲೀಸರಿಗೆ ತನಿಖೆ ನಡೆಸಿ ಮಾರ್ಚ್ 12ರೊಳಗೆ ವರದಿ ಸಲ್ಲಿಸುವಂತೆ ಆದೇಶಿಸಿದೆ.

ದಿಗಂತ್ ನಾಪತ್ತೆಯಾಗಿ 10 ದಿನವಾದರೂ ವಿದ್ಯಾರ್ಥಿಯ ಸುಳಿವು ಸಿಕ್ಕಿಲ್ಲ. ಹೀಗಾಗಿ ವಿದ್ಯಾರ್ಥಿ ದಿಗಂತ್ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದರು. ಮಗನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ದಿಗಂತ್ ತಂದೆ ಪದ್ಮನಾಭ್ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು.

ಜಸ್ಟೀಸ್ ವಿ.ಕಾಮೇಶ್ವರ್ ರಾವ್, ಜಸ್ಟೀಸ್ ಟಿ.ಎಂ ನಡಾಫ್‌ರಿಂದ ಹೈಕೋರ್ಟ್ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ಮಾಡಲಾಗಿದ್ದು, ಮಾರ್ಚ್ 12 ರ ಒಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಪೊಲೀಸರಿಗೆ ಆದೇಶಿಸಲಾಗಿದೆ. ಮಾರ್ಚ್ 13ಕ್ಕೆ ವಿಚಾರಣೆ ಮುಂದೂಡಲಾಗಿದೆ.

ಬಳಿಕ ಫರಂಗಿಪೇಟೆಯಲ್ಲಿ ರೈಲ್ವೆ ಹಳಿಯಲ್ಲಿ ದಿಗಂತ್ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿತ್ತು. ಒಂದು ಚಪ್ಪಲಿಯಲ್ಲಿ ರಕ್ತದ ಕಲೆ ಕಂಡುಬಂದಿತ್ತು. ಸದ್ಯ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

Category
ಕರಾವಳಿ ತರಂಗಿಣಿ