image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಾವೇರಿದ್ದ ಕರಾವಳಿಗೆ ವರುಣನ ಅಮೃತ ಸಿಂಚನ....

ಕಾವೇರಿದ್ದ ಕರಾವಳಿಗೆ ವರುಣನ ಅಮೃತ ಸಿಂಚನ....

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇಂದು ಸಂಜೆ ಉತ್ತಮ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ  ವರ್ಷಧಾರೆಯಾಗಿದ್ದು, ಸುಳ್ಯ, ಪುತ್ತೂರಿನ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಬೆಳ್ತಂಗಡಿ ತಾಲೂಕಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ. 

ಇನ್ನು ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ತುಂತುರು ಮಳೆಯಾಗುವ ಮೂಲಕ ಬಿಸಿಲ ಬೇಗೆಯಿಂದ ಬೇಸತ್ತು ಹೋಗಿದ್ದ ಜನರಿಗೆ ಸ್ವಲ್ಪ  ಮಟ್ಟಿಗೆ ತಂಪರೆದಿದೆ.

Category
ಕರಾವಳಿ ತರಂಗಿಣಿ