ಮಂಗಳೂರು: ಸಮರವೀರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿ (ರಿ) ಮತ್ತು ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ಸಹಭಾಗಿತ್ವದಲ್ಲಿ ಸಮರ ವೀರ ಕೆದಂಬಾಡಿ ರಾಮಯ್ಯ ಗೌಡರ ಮುಂದಾಳತ್ವದಲ್ಲಿ ನಡೆದ ಅಮರ ಸುಳ್ಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಗೆದ್ದು ಮಂಗಳೂರಿನ ಬಾಾವುಟ ಗುಡ್ಡೆಯಲ್ಲಿ ವಿಜಯ ದ್ವಜ ಹಾರಿಸಿ, 13 ದಿವಸ ಆಡಳಿತ ನಡೆಸಿದ ಸಂಸ್ಮರಣಾ ದಿನದ ಆಚರಣೆ ಕಾರ್ಯಕ್ರಮದ ಪ್ರಯುಕ್ತ ಎಪ್ರಿಲ್ 5ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಚಿತ್ರಕಲಾ ಸ್ಪರ್ದೆ ಏರ್ಪಡಿಸಲಾಗಿದೆ. ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1ರಿಂದ 4ನೇ ತರಗತಿ :- ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಬಳಿ ರಾಷ್ಟ್ರ ಧ್ವಜಸ್ತಂಭ - ಹೀಗಿದ್ದರೆ ಚಂದ
5ರಿಂದ 7ನೇ ತರಗತಿ :- ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಉದ್ಯಾನವನ - ಹೀಗಿದ್ದರೆ ಚಂದ
8ರಿಂದ 10ನೇ ತರಗತಿ :- ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ರಸ್ತೆ - ಹೀಗಿದ್ದರೆ ಚಂದ
ಸಾರ್ವಜನಿಕರಿಗೆ :- ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಯುದ್ಧ ಸ್ಮಾರಕ - ಹೀಗಿದ್ದರೆ ಚಂದ.
ಸ್ಪರ್ದೆಯ ಸಮಯ 90 ನಿಮಿಷ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.