image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಸ್ ಸಿಡಿಸಿಸಿ ಬ್ಯಾಂಕ್ ಗೆ ಸಾರ್ವಕಾಲಿಕ ದಾಖಲೆಯ ಲಾಭ-ಡಾ.ಎಂ.ಎನ್.ರಾಜೇಂದ್ರ ಕುಮಾರ್

ಎಸ್ ಸಿಡಿಸಿಸಿ ಬ್ಯಾಂಕ್ ಗೆ ಸಾರ್ವಕಾಲಿಕ ದಾಖಲೆಯ ಲಾಭ-ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು : ಎಸ್‌ಸಿಡಿಸಿಸಿ ಬ್ಯಾಂಕಿನ 1025ಕ್ಕೆ ಅಂತ್ಯವಾದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ರೂ. 110.40 ಕೋಟಿ ಲಾಭ ಗಳಿಸಿದೆ. ಇದು ಎಸ್‌ಡಿಸಿಸಿ ಬ್ಯಾಂಕ್ ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತದ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಅವರು ಎಸ್‌ಡಿಸಿಸಿ ಬ್ಯಾಂಕಿನ ಅವರಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿ, ಬ್ಯಾಂಕಿಂಗ್ ಸೇವೆಯಲ್ಲಿ ದೇಶಕ್ಕೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ssdcc bank) ಅಭಿವೃದ್ಧಿಯ ಮುಂಚೂಣಿಯಲ್ಲಿದೆ. ಸಹಕಾರಿ ರಂಗದಲ್ಲಿ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗೆ ವಿಶಿಷ್ಟ ಹಾಗೂ ವಿನೂತನ ಬ್ಯಾಂಕಿಂಗ್ ಸೇವೆಯನ್ನು ತನ್ನ 113 ಶಾಖೆಗಳ ಮೂಲಕ ನೀಡುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿದೆ. 111 ವರ್ಷಗಳ ಸಾರ್ಥಕ ಸೇವೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ನೀಡುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವರದಿ ವರ್ಷದಲ್ಲಿ ಅಮೋಘ ಸಾಧನೆಗೈದು, ಕಳೆದ ವರ್ಷಕ್ಕಿಂತ ಈ ಬಾರಿ ಲಾಭಾಂಶ ಶೇ 39.59 ಏರಿಕೆಯಾಗಿದೆ (ರೂ.79.09). ಇದು ಎಸ್ ಸಿಡಿಸಿಸಿ ಬ್ಯಾಂಕಿನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಹಾಗೂ ಬ್ಯಾಂಕಿನ ಅನುತ್ಪಾದಕ ಆಸ್ತಿಯ ಪ್ರಮಾಣವು 3.52 ಶೇಕಡದಿಂದ 2.71 ಶೇಕಡಕ್ಕೆ ಇಳಿಕೆಯಾಗಿರುವುದು ಒಂದು ಗಮನಾರ್ಹ ಸಾಧನೆಯಾಗಿದೆ ಎಂದು ಡಾ. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಆಧುನಿಕ ಬ್ಯಾಂಕಿಂಗ್ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಎಸ್ ಸಿಡಿಸಿಸಿ ಬ್ಯಾಂಕ್ ಗ್ರಾಹಕರನ್ನು ಹೆಚ್ಚು ಆಕರ್ಷಿಸುತ್ತಿದೆ.  ವರ್ಷದಲ್ಲಿ 17366.68 ಕೋಟಿ ರೂಪಾಯಿಗಳ ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದ್ದು, ಕಳೆದ ಸಾಲಿನ ಒಟ್ಟು ವ್ಯವಹಾರ (ರೂ.15544.34) ಈ ಬಾರಿ ಶೇ 11.72 ಏರಿಕೆ ಕಂಡಿದೆ. 2025-26ನೆ ಸಾಲಿನಲ್ಲಿ ಬ್ಯಾಂಕ್ ರೂ.19250.00 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹೊಂದಿದೆ. ಠೇವಣಿಗಳ ಸಂಗ್ರಹದಲ್ಲಿ ಎಲ್ಲಾ ಬ್ಯಾಂಕ್ ಗಳಲ್ಲೂ ಸ್ಪರ್ಧೆ ಇದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಎಸ್ ಸಿಡಿಸಿಸಿ ಬ್ಯಾಂಕ್ ತನ್ನ 113 ಶಾಖೆಗಳ ಮುಖಾಂತರ ಒಟ್ಟು 7882.76 ಕೋಟಿ ರೂಪಾಯಿ ಠೇವಣಿ ಸಂಗ್ರಹಿಸಿ ಸಾಧನೆಗೈದಿದೆ. ಮೂಲಕ ಠೇವಣಿ ಸಂಗ್ರಹದಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಕ್ಕಿಂತ ಈ ಬಾರಿ ಶೇ.9.11 ಏರಿಕೆಯಾಗಿದೆ. ಸ್ಪರ್ಧಾತ್ಮಕ ವ್ಯವಹಾರದಲ್ಲಿ ಬ್ಯಾಂಕ್ ರೂ.7775.44 ಕೋಟಿ ಮುಂಗಡ ನೀಡಿದೆ. ಕೃಷಿ ಹಾಗೂ ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ ರೂ.2130.95 ಕೋಟಿ ರೂಪಾಯಿ. ಮಧ್ಯಮಾವಧಿ ಸಾಲ ರೂ.169.79 ಕೋಟಿ, ಹೀಗೆ ಕೃಷಿ ಕ್ಷೇತ್ರಕ್ಕೆ ಒಟ್ಟು ರೂ.2300.74 ಕೋಟಿ ಸಾಲ ನೀಡಲಾಗಿದ್ದು, ಕೃಷಿಯೇತರ ಕ್ಷೇತ್ರಕ್ಕೆ ರೂ.5474.70 ಕೋಟಿ ಸಾಲ ನೀಡಲಾಗಿದೆ. "ಸತತ 30 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇಕಡ 100ರ ಸಾಧನೆ ಬ್ಯಾಂಕ್ ವರದಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ. ಬ್ಯಾಂಕ್ ಗೆ ಒಟ್ಟು 1086 ಸಂಘಗಳು ಸದಸ್ಯರಾಗಿವೆ. ಇವುಗಳ ಪಾಲು ಬಂಡವಾಳ ರೂ.476.00 ಕೋಟಿ ಆಗಿರುತ್ತದೆ. ದುಡಿಯುವ ಬಂಡವಾಳ ರೂ. 12873.14 ಕೋಟಿ ಆಗಿದ್ದು. ಇದು ಕಳೆದ ವರ್ಷಕ್ಕಿಂತ  ಶೇಕಡ 12.74ರಷ್ಟು ಏರಿಕೆ ಕಂಡಿದೆ. ಬ್ಯಾಂಕ್ ರೂ.270.15 ಕೋಟಿ ವಿವಿಧ ನಿಧಿಗಳನ್ನು ಹೊಂದಿರುತ್ತದೆ.

ಶೇಕಡ 8.02 ರಷ್ಟು ಏರಿಕೆ ಕಂಡಿದೆ. ಜಿಲ್ಲೆಯಲ್ಲಿ ಒಟ್ಟು 1,62,836 ರೈತರಿಗೆ ಮಂಗಳಾ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ವಿತರಿಸಲಾಗಿದೆ. 91,548 ಕಿಸಾನ್ ಕ್ರೆಡಿಟ್ ಕಾರ್ಡುದಾರರಿಗೆ ವೈಯುಕ್ತಿಕ ಅಪಘಾತ ವಿಮಾ (insurance) ಸೌಲಭ್ಯವನ್ನು ಒದಗಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಭಾಸ್ಕರ್ ಎಸ್. ಕೋಟ್ಯಾನ್, ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ, ಜೈರಾಜ್ ಬಿ. ರೈ, ಸದಾಶಿವ ಉಳ್ಳಾಲ್, ಮೋನಪ್ಪ ಶೆಟ್ಟಿ ಎಕ್ಕಾರು, ವಾದಿರಾಜ ಶೆಟ್ಟಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್  ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ