image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವರ ಬ್ರಹ್ಮರಥೋತ್ಸವ : ರಥದ ಮೇಲ್ಬಾಗ ಕುಸಿತ!

ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವರ ಬ್ರಹ್ಮರಥೋತ್ಸವ : ರಥದ ಮೇಲ್ಬಾಗ ಕುಸಿತ!

ಮೂಲ್ಕಿ: ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ತಡರಾತ್ರಿ ನಡೆದಿದೆ.

ಶನಿವಾರ ಬೆಳಗ್ಗಿನ ಜಾವ ಸುಮಾರು 1.40 ರಿಂದ 2 ಗಂಟೆ ವೇಳೆ ಬ್ರಹ್ಮರಥೋತ್ಸವ ತೇರಿನ ಮೇಲ್ಬಾಗ ಕುಸಿದು ಬಿದ್ದಿದ್ದು, ಈ ಸಂದರ್ಭದಲ್ಲಿ ಅರ್ಚಕರು ತೇರಿನಲ್ಲೇ ಇದ್ದರು. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂಬ ಮಾಹಿತಿ ದೊರೆತಿದೆ. ಘಟನೆಯ ಬಳಿಕ ದೇವರ ಉತ್ಸವವನ್ನು ಚಂದ್ರ ಮಂಡಲ ರಥದಲ್ಲಿ ದೇವರ ಉತ್ಸವ ಮುಂದುವರಿಸಲಾಯಿತು.

Category
ಕರಾವಳಿ ತರಂಗಿಣಿ