image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಪ್ರಿಲ್ 24 ರಿಂದ ಮೇ 18 ವರೆಗೆ ನಡೆಯಲಿದೆ ಉಳ್ಳಾಲ ಉರೂಸ್

ಎಪ್ರಿಲ್ 24 ರಿಂದ ಮೇ 18 ವರೆಗೆ ನಡೆಯಲಿದೆ ಉಳ್ಳಾಲ ಉರೂಸ್

ಮಂಗಳೂರು: ಉಳ್ಳಾಲದ ಸಯ್ಯದ್ ಮುಹಮ್ಮದ್ ಶರೀಫುಲ್ ಮದನಿ ದರ್ಗಾ ಇದರ 22 ನೇ ಪಂಚವಾರ್ಷಿಕ 432 ನೇ ವಾರ್ಷಿಕ ಉರೂಸ್ ಸಮಾರಂಭವು ಖಾಝಿ ಸುಲ್ತಾನುಲ್ ಉಲಮಾ ಕಾಂತಪುರಂ ಎ.ಪಿ. ಅಬೂಬಕ್ಕರ್ ಮುಸ್ಲಿಯಾರ್ ನೇತೃತ್ವದಲ್ಲಿ ಎಪ್ರಿಲ್ 24 ರಿಂದ ಮೇ 18 ವರೆಗೆ ದರ್ಗಾ ವಠಾರದಲ್ಲಿ ನಡೆಯಲಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಎಪ್ರಿಲ್ 24 ರಂದು ಅಸರ್ ನಮಾಝ್ ಬಳಿಕ ವಾರ್ಷಿಕ ದ್ವಿಕ್ ಮಜ್ಜಿಸ್ ಹಾಗೂ ಉರೂಸ್‌ ಉದ್ಘಾಟನೆ ನಡೆಯಲಿದೆ. ಅದೇ ದಿನ ದರ್ಗಾ ಝಿಯಾರತ್ ನೇತೃತ್ವವನ್ನು ಸಯ್ಯದ್ ಆಟ್ಟಕೋಯ ತಂಬಳ್ ವಹಿಸಲಿದ್ದಾರೆ.ಉಳ್ಳಾಲ ಎ.ಪಿ. ಅಬೂಬಕ್ಕರ್ ಮುಸ್ಲಿಯಾ‌ರ್ ಅವರ ನೇತೃತ್ವದಲ್ಲಿ ನಡೆಯುವ ಉರೂಸ್ ಕಾರ್ಯಕ್ರಮವನ್ನು ಸಯ್ಯದುಲ್ ಉಲಮಾ ಸಯ್ಯದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಬಳ್ ಉದ್ಘಾಟಿಸಲಿದ್ದಾರೆ. ಸಯ್ಯದ್ ಹಾಮಿದ್ ಇಂಬಿಚ್ಚಿಕೋಯ ತಂಬಳ್‌ ದುಆ ನೆರವೇರಿಸಲಿದ್ದಾರೆ. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಮುಖ್ಯ ಅತಿಥಿಗಳಾಗಿ ಸಯ್ಯದ್ ಅಲಿ ಬಾಫಕಿ ತಂಬಳ್, ಇಬ್ರಾಹಿಂ ಖಲೀಲ್ ತಂಬಳ್ ಕಡಲುಂಡಿ, ಉಡುಪಿ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಶರೀಅತ್ ಕಾಲೇಜು ಪ್ರಾಂಶುಪಾಲ ಪ್ರೊ.ಅಹ್ಮದ್ ಕುಟ್ಟಿ ಸಖಾಫಿ, ಅತ್ತಾವುಲ್ಲ ತಂಜಳ್ ಉದ್ಯಾವರ, ಸ್ಪೀಕ‌ರ್ ಯುಟಿ ಖಾದ‌ರ್, ವಸತಿ ಸಚಿವ ಜಮೀರ್ ಅಹಮ್ಮದ್, ಯೆನೆಪೋಯ ಅಬ್ದುಲ್ಲಾ ಕುಂಣಿ ಹಾಜಿ, ಬಿ.ಎಂ.ಫಾರೂಕ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತಿತರರು ಭಾಗವಹಿಸಲಿದ್ದಾರೆ.

ಮೆ 15ರ ಸಂಜೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಾಮಾಜಿಕ ಸಮಾವೇಶ ದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕ‌ರ್ ಯುಟಿ ಖಾದ‌ರ್, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌, ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಕ್ಸ್ ಸಚಿವ ಝಮೀರ್ ಅಹ್ಮದ್, ಪೌರಾಡಳಿತ ಸಚಿವ ರಹೀಮ್ ಖಾನ್, ವಿರೋಧ ಪಕ್ಷದ ನಾಯಕ ಆ‌ರ್.ಅಶೋಕ್, ಸಂಸದ ಬ್ರಿಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದರ್ಗಾ ಸಮಿತಿ ಉಪಾಧ್ಯಕ್ಷ ಅಶ್ರಫ್‌ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್ ಮುಕ್ಕಚೇರಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ