image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

'ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ' ಬಿಡುಗಡೆ...

'ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ' ಬಿಡುಗಡೆ...

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ನ ಗೃಹ ಪತ್ರಿಕೆ " ಮಂಗಳೂರು ಪ್ರೆಸ್ ಕ್ಲಬ್  ಸಮಾಚಾರ " ಇದರ ಈ ವರ್ಷದ ಪ್ರಥಮ ಸಂಚಿಕೆಯನ್ನು ಚಿತ್ರ ನಿರ್ದೇಶಕ, ಸಂಗೀತ ಸಂಯೋಜಕ ರವಿ ಬಸ್ರೂರು ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಿದರು.

ಸಿನಿಮಾ ಸೇರಿದಂತೆ ಕಲೆ ಹಾಗೂ ಕಲಾವಿದರ ಬೆಳವಣಿಗೆಯಲ್ಲಿ ಪತ್ರಿಕಾ ಮಾಧ್ಯಮ ಮಹತ್ವದ ಪಾತ್ರ ವಹಿಸಿದೆ. ಇದರಿಂದ ಕಲಾವಿದರು ಹಾಗೂ ಪತ್ರಕರ್ತರ ಮಧ್ಯೆ ಉತ್ತಮ ಬಾಂಧವ್ಯ ಬೆಳೆದಿದೆ" ಎಂದು ಅವರು‌ ಹೇಳಿದರು.

 ಮಂಗಳೂರು ಪ್ರೆಸ್  ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ,  ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್ ಕ್ಲಬ್ ನ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ, ಕಾರ್ಯದರ್ಶಿ ಪುಷ್ಪರಾಜ್.ಬಿ.ಎನ್. ಉಪಸ್ಥಿತರಿದ್ದರು. ‌ಕಾರ್ಯಕಾರಿ ಸಮಿತಿ ಸದಸ್ಯ‌ ಆರ್.ಸಿ.ಭಟ್ ಕಾರ್ಯಕ್ರಮ ನಿರೂಪಿಸಿದರು.

Category
ಕರಾವಳಿ ತರಂಗಿಣಿ