ಮಂಗಳೂರು: ನಿಧಿಲ್ಯಾಂಡ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪರ‍್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಎರಡು ಐಶಾರಾಮಿ ವಸತಿ ಸಮುಚ್ಚಯಗಳಾದ ಎಸ್ ಕೆ ವಿ ಗಾರ್ಡನ್ ಮತ್ತು ಪೂರ್ವಜ್ ನ ಶಿಲಾನ್ಯಾಸ ಸಮಾರಂಭವು ಇಂದು ನಡೆಯಿತು. ಮಂಗಳೂರಿನ ಲೇಡಿಹಿಲ್-ಚಿಲಿಂಬಿ ಮುಖ್ಯ ರಸ್ತೆಯಲ್ಲಿ "ಎಸ್ ಕೆ ವಿ ಗಾರ್ಡನ್" ನಿರ್ಮಾಣಗೊಳ್ಳಲಿದ್ದು, ಇದು 33 ಮಹಡಿಗಳ ಅತ್ಯಾಧುನಿಕ ಸೌಲಭ್ಯಯುಳ್ಳ ಐಶಾರಾಮಿ ವಸತಿ ಸಮುಚ್ಚಯವಾಗಿದೆ. ಕೆಳಗಿನ ಹಾಗೂ ಮೇಲಿನ ತಳ ಅಂತಸ್ತಿನಲ್ಲಿ ಕಾರ್ ಪಾರ್ಕಿಂಗ್ ಮತ್ತು ಮೇಲಿನ ನೆಲ ಅಂತಸ್ತು ಹಾಗೂ ಮೊದಲ ಅಂತಸ್ತಿನಲ್ಲಿ ಕ್ಲಬ್ ಹೌಸ್ ಸೌಲಭ್ಯಗಳನ್ನು ಒಳಗೊಂಡಿದೆ. ಎಸ್ ಕೆ ವಿ ಗಾರ್ಡನ್ ವಸತಿ ಸಮುಚ್ಚಯವು ವಿಶಾಲವಾದ 3 ಬಿಎಚ್‌ಕೆ, 4 ಬಿಎಚ್‌ಕೆ ಹಾಗೂ 5 ಬಿಎಚ್‌ಕೆ ಅಪಾರ್ಟ್ಮೆಂಟ್‌ಗಳು ಹಾಗೂ ಎರಡು ಡ್ಯೂಪ್ಲೆಕ್ಸ್ ಅಪಾರ್ಟ್ಮೆಂಟ್‌ಗಳನ್ನು ಗ್ರಾಹಕರ ಆದ್ಯತೆಗೆ ಅನುಗುಣವಾಗಿ ನಿರ್ಮಿಸಲಾಗುವುದು.
ಎಸ್ ಕೆ ವಿ ಗಾರ್ಡನ್ ನಿವಾಸಿಗಳಿಗೆ ಝೆನ್ ರೂಂ, ಯೋಗ/ ಎರೋಬಿಕ್ಸ್, ಮಕ್ಕಳ ಅಧ್ಯಯನ ಕೊಠಡಿ, ಮಕ್ಕಳ ಆಟದ ಪ್ರದೇಶ, ವಾಕಿಂಗ್/ ಜಾಗಿಂಗ್ ಟ್ರಾಕ್, ಓಝೋನೈಸ್ಡ್ ಸ್ವಿಮ್ಮಿಂಗ್ ಪೂಲ್, ಸುಸಜ್ಜಿತ ಜಿಮ್ನಾಸಿಯಮ್, ಟೇಬಲ್ ಟೆನ್ನಿಸ್, ಬಿಲಿಯರ್ಡ್ಸ್ ಟೇಬಲ್, ಚೆಸ್, ಕ್ಯಾರಮ್ ಮತ್ತು ಇತರ ಬೋರ್ಡ್ ಆಟಗಳ ಕೊಠಡಿ, ಕಾರ್ಡ್ಸ್ ರೂಮ್, ಮಿನಿ ಥಿಯೇಟರ್, ಸೌನಾ ಸ್ಟೀಮ್ ರೂಂ, ಜಕುಜಿ, ಕಟ್ಟಡದ ಪ್ರವೇಶದ್ವಾರದ ಬಳಿ ನೀರಿನ ಫೌಂಟೇನ್ ಹೊಂದಿರುವ ವೈಶಿಷ್ಟಯುತ ಗೋಡೆಗಳು, ಸಮ್ಮೇಳನ ಸಭಾಂಗಣ ಮತ್ತು ಇನ್ನೂ ಹಲವಾರು ಅತ್ಯಾಧುನಿಕ ಸೌಲಭ್ಯಗಳು ಲಭ್ಯವಿರಲಿದೆ.
ಮಂಗಳೂರಿನ ಶಿವಬಾಗ್‌ನಲ್ಲಿ "ಪೂರ್ವಜ್" ನಿರ್ಮಾಣಗೊಳ್ಳಲಿದ್ದು ತಳ ಮತ್ತು ಕೆಳಗಿನ ನೆಲ ಅಂತಸ್ತಿನಲ್ಲಿ ಕಾರ್ ಪಾರ್ಕ್ ಸೌಲಭ್ಯ ಹಾಗೂ ಮೇಲಿನ ನೆಲ ಅಂತಸ್ತಿನಲ್ಲಿ ಕ್ಲಬ್ ಹೌಸ್ ಅಲ್ಲದೆ ಉಳಿದ 12 ಮಹಡಿಗಳಲ್ಲಿ ವಿಶಿಷ್ಟ 4 ಬಿಎಚ್‌ಕೆ ಗೃಹಗಳನ್ನು ಹೊಂದಿದೆ. ಪ್ರತಿಯೊಂದು ಮಹಡಿಗೂ ಒಂದೊಂದು ಅಪಾರ್ಟ್ಮೆಂಟ್ ಮಾತ್ರವಿದ್ದು ಅನುಕೂಲಕ್ಕೆ ತಕ್ಕಂತೆ ವಿನ್ಯಾಸಗೊಳಿಸಲು ಸಾಧ್ಯವಾಗುವ ವಿಶಾಲ ಕೋಣೆಗಳು ಪೂರ್ವಜ್ ವಸತಿ ಸಮುಚ್ಚಯದ ವೈಶಿಷ್ಟ್ಯವಾಗಿದೆ.
ಪೂರ್ವಜ್‌ನಲ್ಲೂ, ರೂಫ್‌ಟಾಪ್ ಓಝೋನೈಸ್ಡ್ ಸ್ವಿಮ್ಮಿಂಗ್ ಪೂಲ್, ಸುಸಜ್ಜಿತ ಜಿಮ್ನಾಸಿಯಮ್, ಬಿಲಿಯರ್ಡ್ಸ್ ಟೇಬಲ್, ಚೆಸ್/ ಕ್ಯಾರಮ್/ ಇತರ ಬೋರ್ಡ್ ಆಟಗಳ ಕೊಠಡಿ, ಸೌನಾ, ಸ್ಟೀಮ್ ರೂಂ, ಜಕುಜಿ, ಸಮ್ಮೇಳನ ಸಭಾಂಗಣ ಮುಂತಾದ ಆಧುನಿಕ ಸೌಲಭ್ಯಗಳು ಸಿದ್ಧಗೊಳ್ಳಲಿದೆ.
ಶಿಲಾನ್ಯಾಸ ಸಮಾರಂಭದಲ್ಲಿ ಶಾಸಕ ವೇದವ್ಯಾಸ್ ಕಾಮತ್, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್, ಮಾಜಿ ಮೂಡ ಅಧ್ಯಕ್ಷ ರವಿಶಂಕರ್ ಮಿಜಾರ್, ಮಾಜಿ ಮೇಯರ್ ಶಶಿದರ್ ಹೆಗ್ಡೆ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಭಾಸ್ಕರ್ ಮೊಯ್ಲಿ ಮಂಗಳೂರಿನ ಬ್ರಹ್ಮಕುಮಾರೀಸ್ ಕೇಂದ್ರದ ಉಸ್ತುವಾರಿ ಬಿ.ಕೆ. ವಿಶ್ವೇಶ್ವರಿ, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೊ, ಪ್ರಕಾಶ್ ಸಾಲಿಯಾನ್, ದಿಲ್ ರಾಜ್ ಆಳ್ವಾ ಮುಂತಾದವರು ಉಪಸ್ಥಿತರಿದ್ದರು.