ಬೆಳ್ತಂಗಡಿ: ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಸುಭಾಷ್ ಚಂದ್ರ ಶೆಟ್ಟಿ ಅವರು ಮಾತನಾಡಿ ನಿಮ್ಮ ಪರಿಶ್ರಮ ದೃಢ ನಿಟ್ಟಿನ ಪಲವಾಗಿ ಇಂದು ಈ ಫಲಿತಾಂಶ ಫಲಿಸಿತು ಭವಿಷ್ಯದಲ್ಲಿ ಇನ್ನಷ್ಟು ಉತ್ತುಂಗಗಳನ್ನು ತಲುಪಿ ನಿಮ್ಮ ಕನಸನ್ನು ಸಂಕಲ್ಪ ದೊಂದಿಗೆ ಸಾಧಿಸಿ ನಿಮ್ಮ ಮುಂದಿನ ವಿದ್ಯಾಭ್ಯಾಸವು ಉತ್ತಮ ಭವಿಷ್ಯ ನಿರ್ಮಾಣಕ್ಕೆ ದಾರಿ ನೀಡಲಿ ಎಂಬ ಶುಭಾಶಯಗಳನ್ನು ಕೋರಿದರು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಪ್ರಜ್ವಲ್ ರೈ ಮತ್ತು ಶೈಕ್ಷಣಿಕ ನಿರ್ದೇಶಕರಾದ ಶ್ರೀ ಗಂಗಾಧರ್ ಈ ಮಂಡಗಳಲೆ ಹಿರಿಯ ಮತ್ತು ಕಿರಿಯ ಉಪನ್ಯಾಸಕರು ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಹಿರಿಯ ಉಪನ್ಯಾಸಕರಾದ ಪ್ರೊಫೆಸರ್ ಪ್ರತಾಪ್ ದೊಡ್ಡಮನಿ ಯವರು ಕಾರ್ಯಕ್ರಮ ನಿರೂಪಿಸಿದರು.