ಮಂಗಳೂರು: ಮೇ 10ರಂದು ನಡೆಯಲಿರುವ ನವೋದಯ ಸ್ವಸಹಾಯ ಗುಂಪುಗಳ ಸಮಾವೇಶ "ರಜತ ಸಂಭ್ರಮ" ನೆನಪಿಗಾಗಿ ವಿಶಿಷ್ಟ ರೀತಿಯ ಲಾಂಛನವನ್ನು ಕರ್ನಾಟಕದ ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಬಿಡುಗಡೆ ಗೊಳಿಸಲಿದ್ದಾರೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಸಂಸ್ಥಾಪಕರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಅವರು ಎಸ್ ಸಿ ಡಿಸಿ ಸಭಾಂಗಣದಲ್ಲಿ ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ಸಮಾವೇಶ ದೇಶಕ್ಕೆ ಮಾದರಿಯಾಗುವ ಸಮಾವೇಶ ಆಗಲಿದ್ದು, ಈ ಅರ್ಥಪೂರ್ಣ ರಜತ ಸಂಭ್ರಮವನ್ನು ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ನವೋದಯ ರಜತ ಸಂಭ್ರಮದ ನವೋದಯ ಸ್ವ-ಸಹಾಯ ಗುಂಪುಗಳ ಸದಸ್ಯರುಗಳಿಗೆ ಸವಲತ್ತು ವಿತರಣೆಯನ್ನು ಮಹಾರಾಷ್ಟ್ರ ಸರಕಾರದ ಮಾನ್ಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇವರು ನೆರವೇರಿಸಲಿದ್ದು, ರಜತ ಸಂಭ್ರಮದ 'ಸಂತೃಪ್ತಿ' ಸ್ಮರಣ ಸಂಚಿಕೆಯ ಬಿಡುಗಡೆಯನ್ನು ಕರ್ನಾಟಕ ಸರಕಾರದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರು ನೆರವೇರಿಸಲಿದ್ದಾರೆ. ರಜತ ಸಂಭ್ರಮ ಆಚರಣೆಯ ಸಂದರ್ಭ ಸಹಕಾರಿ ಧ್ವಜಾರೋಹಣವನ್ನು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕಯು.ಟಿ. ಖಾದರ್ ಫರೀದ್ ನೆರವೇರಿಸಲಿದ್ದಾರೆ. ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನವನ್ನು ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ಮಾನ್ಯ ಸಚಿವ ಪ್ರಲ್ಲಾದ್ ವಿ. ಜೋಶಿ ಇವರು ನೆರವೇರಿಸಲಿದ್ದಾರೆ.
ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ 'ನವೋದಯ 'ರಜತ ಸಂಭ್ರಮ' ಸಮಾರಂಭ ವನ್ನು ಆಯೋಜಿ ಸಲಾಗಿದ್ದು ಮೇ ತಿಂಗಳ 10ನೇ ತಾರೀಕು ಪೂರ್ವಾಹ್ನ 10.30ಗಂಟೆಗೆ ಮಂಗಳೂರಿನ ಬಂಗ್ರ ಕೂಳೂರುನಲ್ಲಿರುವ ಗೋಲ್ಡ್ ಫಿಂಚ್ ಸಿಟಿ ಯಲ್ಲಿ ಅದ್ದೂರಿಯಲ್ಲಿ ಹಾಗೂ ಚಾರಿತ್ರಿಕ ರೀತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಚಾರಿತ್ರಿಕ ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿದ್ದಾರೆ.
ನವೋದಯ ಸ್ವಸಹಾಯ ಗುಂಪುಗಳು ಗ್ರಾಮೀಣ ಜನರ ಬದುಕಿನಲ್ಲಿ ಆರ್ಥಿಕ ಸ್ವಾವಲಂಬನೆಯನ್ನು ಮೂಡಿಸಿ ಪ್ರಜಾ ಪ್ರಭುತ್ವದ ತಳಹದಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಸಂಘಟನೆ ಹಾಗೂ ಜನಜಾಗೃತಿ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದೆ. "ನಮ್ಮಿಂದ ನಮಗಾಗಿ. ನಮಗೋಸ್ಕರ ಸ್ವಸಹಾಯ ಸಂಘಗಳು" ಎಂಬ ಧೋರಣೆ ಹೊಂದಿರುವ ನವೋದಯ ಸ್ವಸಹಾಯ ಗುಂಪುಗಳು ಗ್ರಾಮಾಂತರ ಪ್ರದೇಶಗಳಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಿವೃದ್ಧಿಯ ಜೊತೆಗೆ ಸಬಲೀಕರಣದ ಹಾದಿಯಲ್ಲಿ ದಾಪುಗಾಲು ಹಾಕುತ್ತಿದೆ. ಈ ಒಂದು ಉದಾತ್ತವಾದ ಉದ್ದೇಶವನ್ನಿಟ್ಟುಕೊಂಡು ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
2000ನೇ ಇಸವಿಯ ಜ.29ರಂದು ಕಾರ್ಕಳದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಆಗಿನ ಸಹಕಾರ ಸಚಿವ ಡಿ.ಕೆ.ಶಿವಕುಮಾರ್ ಅವರಿಂದ ಉದ್ಘಾಟಿಸಲ್ಪಟ್ಟ ನವೋದಯ ಸ್ವಸಹಾಯ ಗುಂಪುಗಳ ಕಾರ್ಯ ವಿಸ್ತಾರವು ಇಂದು ರಾಜ್ಯದ 8 ಜಿಲ್ಲೆಗಳಿಗೆ ಪಸರಿಸಿದ್ದು. ಇದರಲ್ಲಿ ಸುಮಾರು 8ರಿಂದ 9ಲಕ್ಷ ಸದಸ್ಯರಿದ್ದು, ಮುಖ್ಯವಾಗಿ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಲ್ಪಿಸಿಕೊ ಟ್ಟಿದೆ. ಮಹಿಳೆಯರು ಪುರುಷರಿಗೆ ಸರಿಸ ಮಾನವಾಗಿ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ. ಆದ ಕಾರಣ ನವೋದಯದ ರಜತ ಸಂಭ್ರಮವನ್ನು ದೇಶಕ್ಕೆ ಮಾದರಿ ಯಾಗಿ ಹಮ್ಮಿಕೊಳ್ಳುವ ಯೋಜನೆ ರೂಪಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಸುಮಾರು 3000ದಷ್ಟು ಬಸ್‌ಗಳಲ್ಲಿ ಜನ ವಿವಿಧ ಕಡೆಗಳಿಂದ ಸಮಾವೇಶದ ಸ್ಥಳಕ್ಕೆ ಆಗಮಿಸಲಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ಇದರ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಟ್ರಸ್ಟ್(ರಿ.) ಮಂಗಳೂರು ಇದರ ಸಂಸ್ಥಾಪಕರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಕ್ಷೇತ್ರ ದರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಲಿರುವರು.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಚಿವರಾದ ಕೆ. ಎನ್. ರಾಜಣ್ಣ ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶ ನಾಲಯ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹಾಗೂ ಅಬಕಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರು ಭಾಗವಹಿಸಲಿದ್ದಾರೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಬ್ಯಾಂಕ್ ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ ಭಾಸ್ಕರ್.ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ.ದೇವಿ ಪ್ರಸಾದ್ ಶೆಟ್ಟಿ ಬೆಳಪು, ಎಂ. ವಾದಿರಾಜ ಶೆಟ್ಟಿ, ಎಸ್. ಬಿ. ಜಯರಾಮ್ ರೈ ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಕುಶಾಲಪ್ಪ ಗೌಡ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್. ಎನ್. ರಮೇಶ್, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಾ ಹಣಾಧಿಕಾರಿ ಗೋಪಾಲಕೃಷ್ಣ ಚಟ್ ಕೆ, ನವೋದಯ ಟ್ರಸ್ಟಿಗಳಾದ ಶ್ರೀ ಮೇಘರಾಜ್ ಜೈನ್, ಸುನಿಲ್ ಕುಮಾರ್ ಬಜಗೋಳಿ, ಸ್ಕಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಟ್ರಸ್ಟ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಮೊದ ಉಪಸ್ಥಿತರಿದ್ದರು.