image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ವಿಮಾನ ದುರಂತ: ಮೇ 22 ರಂದು ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳೂರು ವಿಮಾನ ದುರಂತ: ಮೇ 22 ರಂದು ಶ್ರದ್ಧಾಂಜಲಿ ಕಾರ್ಯಕ್ರಮ

ಮಂಗಳೂರು:- 2010 ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತವಾದ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಜರಗಿಸುತ್ತಾ ಬಂದಿದೆ. ವಿಮಾನ ಅಪಘಾತದಲ್ಲಿ ಮರಣ ಹೊಂದಿದ 158 ಜನರ ನೆನಪಿಗಾಗಿ ಕೂಳೂರು ತಣ್ಣೀರು ಬಾವಿ ರಸ್ತೆಯಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ.

 ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು  ಈ ಸ್ಥಳದಲ್ಲಿ ಮೇ 22 ರಂದು ಬೆಳಿಗ್ಗೆ 9:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ