ಮಂಗಳೂರು:- ಪುತ್ತೂರು ತಾಲ್ಲೂಕಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಲ್ತಡ್ಕ ಇರ್ದೆ ಗ್ರಾಮ ಶಾಲಾ ಅವರಣದಲ್ಲಿ ಪುತ್ತೂರು ಸಾಮಾಜಿಕ ಅರಣ್ಯ ವಲಯದ ವತಿಯಿಂದ ಬೆಳೆಸಿದ ನೆಡುತೋಪಿನಲ್ಲಿರುವ 0.10 ಸೆಂ.ಮೀ ನಿಂದ 0.30 ಸೆಂ.ಮೀ ರವರೆಗಿನ 50 ಅಕೇಶಿಯಾ ಮರಗಳು ಹಾಗೂ ಅದಕ್ಕಿಂತ ಹೆಚ್ಚಿನ ಸುತ್ತಳತೆಯ 216 ಅಕೇಶಿಯಾ ಮ್ಯಾಂಜಿಯಂ ಹೀಗೆ ಒಟ್ಟು 266 ಮರಗಳನ್ನು ಕಡಿಯಲು ಉದ್ದೇಶಿಸಿದ್ದು, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆಯಡಿ 50 ಕ್ಕಿಂತ ಹೆಚ್ಚು ಮರಗಳನ್ನು ಕಡಿಯಬೇಕಾದಲ್ಲಿ ಸಾರ್ವಜನಿಕ ಅಹವಾಲನ್ನು ಸ್ವೀಕರಿಸಿ ಕ್ರಮ ಕೈಗೊಳ್ಳಬೇಕಾಗಿರುವುದರಿಂದ ಮೇ 30 ರಂದು ಬೆಳಿಗ್ಗೆ 11 ಗಂಟೆಗೆ ಪುತ್ತೂರು ತಾಲ್ಲೂಕು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪೇರಲ್ತಡ್ಕ ಬಯಲು ರಂಗ ಮಂಟಪದಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಕರೆಯಲಾಗಿದೆ.
ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದು ಎಂದು ಸಾಮಾಜಿಕ ಅರಣ್ಯ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.