image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೇ 30ಕ್ಕೆ ಕುತ್ಲುರು ಸರಕಾರಿ ಶಾಲೆ ಯಲ್ಲಿ ಶಾಲಾ ಆರಂಭೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ

ಮೇ 30ಕ್ಕೆ ಕುತ್ಲುರು ಸರಕಾರಿ ಶಾಲೆ ಯಲ್ಲಿ ಶಾಲಾ ಆರಂಭೋತ್ಸವ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಮಾಡಿದ ಕುತ್ಲುರು ಸರಕಾರಿ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಾಲಾ ಆರಂಭೋತ್ಸವ ಮೇ  30 ರಂದು ನಸೆಯಲಿದೆ. ಕಾಮಗಾರಿಗಳ ಉದ್ಘಾಟನೆ ನ್ನು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗರಾರ ಕೆ ವಿ ಪ್ರಭಾಕರ್ ನೆರವೇರಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಪತ್ರಿಕಾ ಗೋಷ್ಠಿ ಯಲ್ಲಿ ತಿಳಿಸಿದರು.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಈ ಸರಕಾರಿ ಶಾಲೆಗೆ ಮುಖ್ಯಮಂತ್ರಿಗಳ ಮಾಧ್ಯಮ ಕೆ ವಿ ಪ್ರಭಾಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂಲಕ 2 ಕಂಪ್ಯೂಟರ್ಸ್ ಹಾಗೂ ಪ್ರಾಜೆಕ್ಟ್ರ ರ್ ನೀಡಿದ್ದಾರೆ. ಶಾಲಾ ವಿದ್ಯಾರ್ಥಿಗಳಿಗೆ ಪ್ಯಾಂಟ್, ಟೀ ಶರ್ಟ್ ಹಾಗೂ ಸ್ಕೂಲ್ ಬ್ಯಾಗ್ ಗಳನ್ನು ವೈಯಕ್ತಿಕ ಕೊಡುಗೆ ನೀಡಿದ್ದಾರೆ. ಅಲ್ಲದೆ ಶಾಲೆಗೆ ಪೈಂಟ್ ವ್ಯವಸ್ಥೆ ಮಾಡಿದ್ದಾರೆ. ಅಲ್ಲದೆ ಶಾಲಾ ಮಕ್ಕಳಿಗೆ ಕರೆದುಕೊಂಡು ಬರಲು ವಾಹನ ವ್ಯವಸ್ಥೆ ಮಾಡಿ ಕೊಡುವುದಾಗಿ ತಿಳಿಸಿದ್ದಾರೆ. ಈ ಸರಕಾರಿ ಶಾಲೆಗೆ ಭರಪೂರ ಕೊಡುಗೆ ನೀಡಿರುವ ಕೆ ವಿ ಪ್ರಭಾಕರ್ ಅವರನ್ನು ಎಲ್ಲರ ಪರವಾಗಿ ವಿದ್ಯಾರ್ಥಿಗಳು ಸನ್ಮಾನಿಸಲಿದ್ದಾರೆ ಕುತ್ಲುರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಇದೇ ವೇಳೆ ಎಂ ಆರ್ ಪಿ ಎಲ್ ಸಿ ಎಸ್ ಆರ್ ನಿಧಿಯಿಂದ 8 ಲಕ್ಷ ರೂಪಾಯಿ ವೆಚ್ಚದಲ್ಲಿ ಸೌಚಾಲಯ  ಹಾಗೂ 8 ಲಕ್ಷ ರೂಪಾಯಿ ದಲ್ಲಿ ಶಾಲಾ ಕೊಠಡಿಗಳಿಗೆ ಟೈಲ್ಸ್ ಹಾಕಲಾಗಿದೆ. ಇದರ ಉದ್ಘಾಟನೆ ಯನ್ನು ಎಂ ಆರ್ ಪಿ ಎಲ್ ಗ್ರೂಪ್ ಜನರಲ್ ಮ್ಯಾನೇಜರ್ ಕೃಷ್ಣ ಹೆಗ್ಡೆ ನೆರವೇರಲಿಸಲಿದ್ದಾರೆ. ಶಾಲಾ ಪೈಂಟಿಂಗ್ ನ್ನು ದಕ್ಷಿಣ ಕನ್ನಡ ಪ್ರಭಾರ ಜಿಲ್ಲಾಧಿಕಾರಿ ಡಾ ಆನಂದ್ ಉದ್ಘಾಟಿಸಲಿದ್ದಾರೆ. ಕಂಪ್ಯೂಟರ್ ಕೊಠಡಿ ಯನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟ್ಟಧಿಕಾರಿ ಯತೀಶ್ ಎನ್ ಉದ್ಘಾಟಿಸಲಿದ್ದಾರೆ. ಶಾಲಾ ನಾಮ ಫಲಕ ವನ್ನು ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ಉದ್ಘಾಟಿಸಲಿದ್ದಾರೆ. ಹಸಿರೇ ಉಸಿರು ಕಾರ್ಯಕ್ರಮ ವನ್ನು ಧರ್ಮೋತ್ತಾನ ಟ್ರಸ್ಟ್ ಕಾರ್ಯದರ್ಶಿ ವೀರು ಶೆಟ್ಟಿ ನೆರವೇರಿಸಲಿಲಿದ್ದಾರೆ. ಎಲೆಕ್ಟ್ರಿಕಲ್ ವ್ಯವಸ್ಥೆ ಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭೀವೃದ್ಧಿ ಯೋಜನೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮ ದಲ್ಲಿ ಬಿಎಎಸ್ಎಫ್ ಇಂಡಿಯಾ ಲಿಮಿಟೆಡ್ ಸೈಟ್ ಡೈರೆಕ್ಟರ್ ಶ್ರೀನಿವಾಸ್ ಪ್ರಾಣೇಶ್, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಂತೋಷ್ ಪೈ, ಎಂಎಸ್ಇ ಝೆಡ್ ಮುಖ್ಯ ನಿರ್ವಹಣಾಧಿಕಾರಿ ಸೂರ್ಯ ನಾರಾಯಣ್,,ಜಿಲ್ಲಾ ವಾರ್ತಾ ಅಧಿಕಾರಿ ಖಾದರ್ ಷಾ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಶಾಲೆಯ ಕೊಠಡಿ ಗಳಲ್ಲಿ ಪ್ರೇಕ್ಷಣಿಯ ಸ್ಥಳಗಳ ಕುರಿತು, ಪರಿಸರ ಕುರಿತು ಚಿತ್ರಗಳನ್ನು ಬಿಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 5 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲೆಗೆ ಪೈಂಟಿಂಗ್ ಮಾಡಲಾಗಿದೆ ಎಂದು ಕುತ್ಲುರು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ತಿಳಿಸಿದರು.

ಪತ್ರಿಕಾಗೋಷ್ಠಿ ಯಲ್ಲಿ  ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ ಎನ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ