image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ ಭತ್ಯೆ: ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಕಾನೂನು ಪದವೀಧರರಿಗೆ ತರಬೇತಿ ಭತ್ಯೆ: ಅರ್ಜಿ ಆಹ್ವಾನ

ಮಂಗಳೂರು: ಅಲ್ಪಸಂಖ್ಯಾತರ  ಕಲ್ಯಾಣ ಇಲಾಖೆ ವತಿಯಿಂದ 2025-26 ಸಾಲಿಗೆ 5 ಅರ್ಹ ಅಭ್ಯರ್ಥಿಗಳಿಗೆ ನಾಲ್ಕು ವರ್ಷದ ಅವಧಿಗೆ ಕಾನೂನು ತರಬೇತಿ ಪಡೆಯಲಿಚ್ಛಿಸುವ ಅಲ್ಪಸಂಖ್ಯಾತರ ಕಾನೂನು ಪದವೀಧರರಿಂದ ನಿಗಧಿತ ನಮೂನೆಯಲ್ಲಿ  ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 

 ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿತರಾದ ಕಾನೂನು ಪದವೀಧರರಾಗಿದ್ದು, ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿ ನಿಯೋಜಿಸಲಾಗುವುದು. ಕುಟುಂಬದ ವಾರ್ಷಿಕ ಆದಾಯವು ರೂ. 3.50 ಲಕ್ಷವನ್ನು ಮೀರಿರಬಾರದು. 30 ವರ್ಷದೊಳಗಿನ ವಯೋಮಿತಿಯವರಾಗಿದ್ದು, ಅಂತಿಮ ಕಾನೂನು ಪದವಿಯನ್ನು ಪೂರ್ಣಗೊಳಿಸಿ 2 ವರ್ಷ ಮೀರಿರಬಾರದು. 

ಅರ್ಜಿಯನ್ನು ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯಲ್ಲಿರುವ ಮೌಲಾನಾ ಅಝಾದ್ ಭವನದ ಮೊದಲನೇ ಮಹಡಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಛೇರಿಯಲ್ಲಿ ಪಡೆದು ದಾಖಲೆ ಪತ್ರದ ಜೊತೆಗೆ ಜೂನ್ 30  ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ