image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟದಿಂದ ಮನೆ ಮನೆ ಯಕ್ಷಗಾನಕ್ಕೆ ಗೆಜ್ಜೆ ಮಹೂರ್ತದೊಂದಿಗೆ ಚಾಲನೆ

ತೆಂಕುತಿಟ್ಟು ಚಿಕ್ಕ ಮೇಳಗಳ ಒಕ್ಕೂಟದಿಂದ ಮನೆ ಮನೆ ಯಕ್ಷಗಾನಕ್ಕೆ ಗೆಜ್ಜೆ ಮಹೂರ್ತದೊಂದಿಗೆ ಚಾಲನೆ

ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಪ್ರಚಲಿತದಲ್ಲಿರುವ ವೃತ್ತಿಪರ ಯಕ್ಷಗಾನದ ಬಡ ಕಲಾವಿದರು ಜೀವನೋಪಾಯಕ್ಕಾಗಿ ಹಿಂದಿನ ಕಾಲದಿಂದಲೂ ಆಚರಿಸಿಕೊಂಡ ಬಂದ ಮಳೆಗಾಲದಲ್ಲಿ ಮನೆ ಮನೆ ಯಕ್ಷಗಾನ 5 ಜನರ ತಂಡ ಪ್ರತಿ ಮನೆಗಳಿಗೂ ಭೇಟಿ ನೀಡಿ ಸುಮಾರು 20 ನಿಮಿಷ ದಿವ್ಯ ಸಂದೇಶ ಇರುವ ಒಂದು ಯಕ್ಷಗಾನದ ತುಣುಕನ್ನು ಪ್ರದರ್ಶಿಸಿ ಆ ಮನೆಯವರು ನೀಡುವ ದೇಣಿಗೆಯನ್ನು ಸ್ವೀಕರಿಸಿ, ಮುಂದಿನ ಮನೆಗೆ ಹೀಗೇ ಪ್ರತಿ ದಿನಾ ರಾತ್ರಿ 10-30ರ ತನಕ ಸಂಚರಿಸುತ್ತದೆ. ನಂತರ ಆ ದಿನ ಮುಕ್ತಾಯಗೊಂಡು ಮತ್ತೆ ಮರುದಿನ ಸಂಜೆ 5-30ರಿಂದ 10-30ರ ತನಕ ನಿತ್ಯ ಹೀಗೆ ಕಲೆಯನ್ನು ಪ್ರದರ್ಶಿಸುತ್ತಾ ಸಮಾಜಕ್ಕೆ ದಿವ್ಯ ಸಂದೇಶ ಸಾರುತ್ತಾ ಸನಾತನ ಧರ್ಮದ ತಿರುಳನ್ನು ಸಾರುವ ಮೂಲಕ ಕಲೆ ಹಾಗೂ ಕಲಾವಿದರನ್ನು ಘೋಷಿಸುವ ನಿಟ್ಟಿನಲ್ಲಿ ಕಾರ್ಯಾಚರಿಸುವ "ಚಿಕ್ಕ ಮೇಳಗಳ ಒಕ್ಕೂಟ" ಎಂಬ ಸಂಸ್ಥೆ ಕಳೆದೆರಡು ವರುಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿದೆ. ಸುಮಾರು 50ಕ್ಕೂ ಮೇಲ್ಪಟ್ಟು ಚಿಕ್ಕಮೇಳಗಳ ತಂಡವನ್ನು ಒಂದೇ ವ್ಯವಸ್ಥೆಯಡಿ ತಂದು ಶಿಸ್ತು ಸಂಪ್ರದಾಯಕ್ಕೆ, ಸಭ್ಯತೆಗೆ ಅಡಚಣೆಯಾಗದಂತೆ ನೀತಿ ನಿಯಮಾವಳಿ ರೂಪಿಸಿಕೊಂಡಿದೆ. 2025ರ ತಿರುಗಾಟವನ್ನು ಜೂನ್  5ನೇ ತಾರೀಕಿಗೆ ತಳಕಳ ಕಾರೀ ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಯಕ್ಷ ಪ್ರದರ್ಶನ ಮಾಡಿ ಗೆಜ್ಜೆ ಮುಹೂರ್ತದೊಂದಿಗೆ ಗಣ್ಯರ ಉಪಸ್ಥಿತಿಯಲ್ಲಿ ಚಾಲನೆ ನೀಡಲಾಗುವುದೆಂದು ಒಕ್ಕೂಟದ ಅದ್ಯಕ್ಷ ಸರಪಾಡಿ ಅಶೋಕ ಶೆಟ್ಟಿ ಹೇಳಿದರು. ಅವರು ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಪ್ರಸ್ತುತ ನೋಂದಾಯಿತ ಸಂಸ್ಥೆಯೊಂದಿಗೆ ತಮ್ಮ ತಮ್ಮ ತಂಡವನ್ನು ನೋಂದಾಯಿಸಿಕೊಂಡು ದ.ಕ. ಜಿಲ್ಲಾದ್ಯಂತ ಸಂಚರಿಸುವ ಬಡ ಕಲಾವಿದರ "ಚಿಕ್ಕಮೇಳ"ದ ಕಲಾ ತಂಡದಲ್ಲಿರುವ ಕಲಾವಿದರಿಗೆ ಕಾನೂನಿನಡಿಯಲ್ಲಿ ರಕ್ಷಣೆ ನೀಡಬೇಕು. ಅಲ್ಲದೆ ನಮ್ಮೊಂದಿಗೆ ನೋಂದಾಯಿಸದೆ ಅಶಿಸ್ತು, ಅಸಭ್ಯತೆಯ ಮೂಲಕ ನೋಂದಾಯಿತ ನಮ್ಮ ಚಿಕ್ಕಮೇಳದ ಒಕ್ಕೂಟದ ವ್ಯವಸ್ಥೆಗೆ ಭಂಗ ತರುವ ಅನಧಿಕೃತ "ಚಿಕ್ಕ ಮೇಳದ ಹೆಸರಿನಲ್ಲಿ ತಿರುಗಾಟ ಮಾಡಿದರೆ ಅವರ ಮೇಲೆ ಶಿಸ್ತು ಕ್ರಮ ಕೈಗೊಂಡು ನೈಜ ಕಲಾವಿದರ ಬದುಕಿಗೆ ಸಹಕರಿಸಬೇಕಾಗಿ ಸಾದರದ ಅಪೇಕ್ಷೆ ಎಂದರು. 

ಕಳೆದ ವರುಷ ಅನಧಿಕೃತ ಚಿಕ್ಕಮೇಳದ ಹೆಸರಿನಲ್ಲಿ ಕೆಲವು ಭಾಗಗಳಲ್ಲಿ ಅನಪೇಕ್ಷಿತ ಘಟನೆಗಳು ನಡೆದಿರುತ್ತದೆ. ಈ ಎಲ್ಲಾ ಕಾರಣಕ್ಕಾಗಿ ಚಿಕ್ಕಮೇಳಗಳ ಒಕ್ಕೂಟದ ನಿಯಮಾವಳಿಗೆ ವಿರುದ್ಧವಾಗಿ ತಿರುಗಾಟ ಮಾಡಬಾರದು ಎಂದು ಮಾನ್ಯ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೂ ಮನವಿ ಮಾಡಲಾಗಿದೆ ಎಂದರು. 

ಪತ್ರಿಕಾಗೋಷ್ಠಿಯಲ್ಲಿ ಕುಮಾರ್ ಮಾಲೆಮಾರ್ ರಮೇಶ ಕುಲಶೇಖರ,ಮೋಹನ ಕಲಂಬಾಡಿ, ಸುದರ್ಶನ್, ಸಂತೋಷ ಕುಮಾರ್, ಶರಣ್ ಪೂಜಾರಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ