image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಮೀನುಗಾರರಿಗೆ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ

ಮಂಗಳೂರು:ಮೀನುಗಾರಿಕೆ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ‘ಮತ್ಸ್ಯಾಶ್ರಯ’ ಯೋಜನೆಯಡಿ ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಾಣ ಮಾಡಲು ಸಹಾಯಧನ ನೀಡುವ ಕುರಿತು ಒಟ್ಟು 200 ಮನೆಗಳು ಹಂಚಿಕೆಯಾಗಿರುತ್ತದೆ. ಈ ಬಗ್ಗೆ ಅರ್ಹ ವಸತಿ ರಹಿತ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಫಲಾನುಭವಿಗಳು ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ  ನಗರದ ಉರ್ವಾಸ್ಟೋರ್ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ  ಪುತ್ತೂರು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿರುವ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ