ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಎಲ್ಲರಿಗೂ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಭಾರತವು ವಿಶ್ವದ ಆರೋಗ್ಯದ ರಾಯಭಾರಿಯಾಗಿದ್ದು ಪ್ರತಿಯೊಬ್ಬ ವ್ಯಕ್ತಿಯ ದೈಹಿಕ ಚೈತನ್ಯ ಹಾಗೂ ಮಾನಸಿಕ ಶಾಂತಿಗೆ ಯೋಗ ಅತ್ಯಗತ್ಯವಾಗಿದೆ. ಸನಾತನ ಸಂಸ್ಕೃತಿಯಲ್ಲಿ ಯೋಗಕ್ಕೆ ಶ್ರೇಷ್ಠ ಸ್ಥಾನವಿದ್ದು ಇಂತಹ ಯೋಗ ಪದ್ಧತಿಯನ್ನು ಜಾಗತಿಕ ಮಟ್ಟದಲ್ಲಿ ಪಸರಿಸಿದ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ದೂರದೃಷ್ಟಿಯನ್ನು ಇಡೀ ಜಗತ್ತೇ ಗೌರವಿಸುತ್ತಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂಸದ ಬ್ರಿಜೇಶ್ ಚೌಟ, ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಂಜುಳಾ ರಾವ್, ಪೂರ್ಣಿಮಾ, ಕ್ಯಾ.ಗಣೇಶ್ ಕಾರ್ಣಿಕ್, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಅಶ್ವಿತ್ ಕೊಟ್ಟಾರಿ, ಸಂಜಯ್ ಪ್ರಭು, ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಸೇರಿದಂತೆ ಪಕ್ಷದ ಪ್ರಮುಖರು, ಮಂಡಲದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.