image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ನೂತನ ಜಿಲ್ಲಾಧಿಕಾರಿಗೆ ಸ್ವಾಗತ

ದಕ ಜಿಲ್ಲಾ ಯುವ ಜೆಡಿಎಸ್ ವತಿಯಿಂದ ನೂತನ ಜಿಲ್ಲಾಧಿಕಾರಿಗೆ ಸ್ವಾಗತ

ಮಂಗಳೂರು : ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ಜಿಲ್ಲೆಗೆ ನೂತನವಾಗಿ ಆಗಮಿಸಿ ಅಧಿಕಾರ ಸ್ವೀಕರಿಸಿರುವ ಜಿಲ್ಲಾಧಿಕಾರಿ ದರ್ಶನ್ ಅವರನ್ನು ಭೇಟಿ ಮಾಡಿ ಸ್ವಾಗತ ಕೋರಲಾಯಿತು. 

ಈ ವೇಳೆ ಮಾತನಾಡಿದ ದಕ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಜಿಲ್ಲೆಯಲ್ಲಿ ಮರಳು ಸಮಸ್ಯೆಯಿಂದಾಗಿ ಬಡವರು ಮನೆ ಕಟ್ಟಲು ಕೂಡ ಸಾಧ್ಯವಾಗದ ಪರಿಸ್ಥಿತಿ ಇದ್ದು ಈ ನಿಟ್ಟಿನಲ್ಲಿ ನೂತನ ಜಿಲ್ಲಾಧಿಕಾರಿಗಳೂ ಗಮನ ಹರಿಸುವಂತೆ, ಜಿಲ್ಲೆಯ ಶಾಂತಿ ಕಾಪಾಡುವಲ್ಲಿ ಪ್ರಮುಖ ಆದ್ಯತೆಯಾಗಿ ಪರಿಗಣಿಸುವಂತೆ, ಜಿಲ್ಲೆಯಲ್ಲಿನ ಕಂದಾಯ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು ಅದರ ಬಗ್ಗೆ ಕೂಡ ಗಮನ ಹರಿಸುವಂತೆ ಮನವಿ ಮಾಡಿದರು. ಅಲ್ಲದೆ ಪಕ್ಷದ ವತಿಯಿಂದ ಜಿಲ್ಲೆಯ ಅಭಿವೃದ್ಧಿ ಕುರಿತ ವಿಚಾರಗಳಿಗೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು. 

ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗು ಜಿಲ್ಲಾ ಸಂಘಟನಾ ಉಸ್ತುವಾರಿಯಾದ ರತೀಶ್ ಕರ್ಕೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಹಾಗು ಯುವ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ಆದರ್ಶ್ ಸುಧಾಕರ್, ನಿಶಾಂತ್ ಪೂಜಾರಿ, ವಿನೀತ್ ಜೆ, ಸುಮಿತ್ ಸುವರ್ಣ. ಮುಂತಾದವರು ಪಾಲ್ಗೊಂಡಿದ್ದರು

Category
ಕರಾವಳಿ ತರಂಗಿಣಿ