ಮಂಗಳೂರು : ಆಳ್ವಾಸ್ ಶಿಕ್ಷಣ ಪತಿಷ್ಠಾನದ ವತಿಯಿಂದ ಅಯೋಜಿಸಲ್ಪಡುತ್ತಿರುವ ಹದಿನೈದನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳ ಆಗಸ್ಟ್ 1 ಹಾಗೂ 2 ರಂದು ಮೂಡಬಿದ್ರೆಯ ವಿದ್ಯಾಗಿರಿಯ ಕಾಲೇಜು ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2007ರಲ್ಲಿ ಪ್ರಾರಂಭವಾದ ಅಳ್ವಾಸ್ ಪ್ರಗತಿ- ಉದ್ಯೋಗ ಮೇಳವು ವೃತ್ತಿ ಆಕಾಂಕ್ಷಿಗಳಿಗೆ ರಾಷ್ಟ್ರೀಯ ಹಾಗೂ ಅಂತರ್‌ರಾಷ್ಟ್ರೀಯ ಕಂಪೆನಿಗಳಲ್ಲಿ ಉದ್ಯೋಗಗಿಟ್ಟಿಸುವಲ್ಲಿ ಶ್ರೇಷ್ಠವೇದಿಕೆಯಾಗಿ ಜನಮಾನಸದಲ್ಲಿ ಹೆಸರುವಾಸಿಯಾಗಿದೆ, ಸಂಸ್ಥೆಯು ಈವರೆಗೆ ದೇಶದ ವಿವಿಧ ಭಾಗಗಳಲ್ಲಿ 21 ಬೃಹತ್ ಉದ್ಯೋಗ ಮೇಳಗಳನ್ನು ಬಹಳ ವ್ಯವಸ್ಥಿ ತವಾಗಿ ನಡೆಸಿದೆ. ಪ್ರತೀ ಉದ್ಯೋಗ ಮೇಳದಲ್ಲಿ ಸರಾಸರಿ 200ರಷ್ಟು ಪ್ರತಿಷ್ಠಿತ ಕಂಪೆನಿಗಳು ಪಾಲ್ಗೊಂಡು. ಇಲ್ಲಿವರೆಗೆ ಒಟ್ಟು 36,151 ಉದ್ಯೋಗಗಳನ್ನು ನೀಡಿದೆ. 61,517 ಅಭ್ಯರ್ಥಿಗಳು ವಿವಿಧ ಕಂಪೆನಿಗಳ ಶಾರ್ಟ್‌ಲಿಸ್ಟ್‌ನಲ್ಲಿ ಸೇರ್ಪಡೆಗೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಬಾರಿ ಬ್ಯಾಂಕಿಂಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಚರಿಂಗ್, ಹೆಲ್ತ್ ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ. ಈ ಕಂಪೆನಿಗಳು ಪದವಿ ಮತ್ತು ಸ್ನಾತಕೋತ್ತರ ಪದವೀಧರರು, ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್, ಇಂಜಿನಿಯರಿಂಗ್, ಕಲಾ, ವಾಣಿಜ್ಯ ಹಾಗೂ ಮ್ಯಾನೇಜ್‌ಮೆಂಟ್, ಬೇಸಿಕ್ ಸೈನ್ಸ್ ನರ್ಸಿಂಗ್, ಐಟಿಐ, ಡಿಪ್ಲೋಮಾ ಪಿಯುಸಿ, ಎಸ್ಸೆಸೆಲ್ಸಿ ಹಾಗೂ ಇತರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಿವೆ ಎಂದು ವಿವರಿಸಿದರು.