image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ-ರಾಜೇಶ್ ಬಿ

ಗಿಡಗಳ ಸಂರಕ್ಷಣೆಗೆ ಸಾಮೂಹಿಕ ಜಾಗೃತಿ ಅಗತ್ಯ-ರಾಜೇಶ್ ಬಿ

ಮಂಗಳೂರು: ಗಿಡಗಳ ಸಂರಕ್ಷಣೆಯ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯ ವಿದೆ ಎಂದು ಮಂಗಳೂರು ವಲಯ ಅರಣ್ಯ ಅಧಿಕಾರಿ ರಾಜೇಶ್  ತಿಳಿಸಿದ್ದಾರೆ. ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮಾಚರಣೆಯ ಅಂಗವಾಗಿ ಅರಣ್ಯ ಇಲಾಖೆ  ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಸುರತ್ಕಲ್ ಕೋಡಿಕೆರೆ (ಎಸ್ ಟಿ ಪಿ )ಯಲ್ಲಿ ವನಮಹೋತ್ಸವ ಹಾಗೂ  50 ಗಿಡಗಳನ್ನು ನೆಡುವೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು  ಮಾತನಾಡುತ್ತಿದ್ದರು.  ಜಾಗತಿಕ ತಾಪಮಾನ ಏರಿಕೆ,ಹವಾಮಾನದ ವೈಪರೀತ್ಯಗಳು ಸೇರಿದಂತೆ  ಪರಿಸರದಲ್ಲಿನ  ಸವಾಲುಗಳಿಗೆ  ಸಂಬಂಧಿಸಿದಂತೆ ವಿದ್ಯಾರ್ಥಿ ಗಳಲ್ಲಿ ಹಾಗೂ ಸಮಾಜದಲ್ಲಿ ಸಾಮಾಜಿಕ ವಾಗಿ ಜಾಗೃತಿ ಮೂಡಿಸಬೇಕಾಗಿದೆ. ಮಂಗಳೂರು ನಗರದಲ್ಲಿ 25ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ ಮತ್ತು ಈ ಗಿಡಗಳನ್ನು ನೆಟ್ಟು ಸಂರಕ್ಷಣೆಯ  ನಿಗಾವಹಿಸುವ ಬಗ್ಗೆ ಮಾಹಿತಿ ಸಂಗ್ರಹಿಸ ಲಾಗುತ್ತಿದೆ.ಈಗಾಗಲೇ ಸುಮಾರು 9000 ಗಿಡಗಳನ್ನು ಅರಣ್ಯ ಇಲಾಖೆ ಯವತಿಯಿಂದ ನೆಡಲಾಗಿದೆ.ಈ ನಿಟ್ಟಿನಲ್ಲಿ ಸಾಮೂಹಿಕ ಸಹಭಾಗಿತ್ವ ದ ಅಗತ್ಯವಿದೆ ಎಂದು ರಾಜೇಶ್ ತಿಳಿಸಿದ್ದಾರೆ.

 ಸಮಾರಂಭದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ,ಸುರತ್ಕಲ್  ಅರಣ್ಯವಲಯದ ಉಪ ಅರಣ್ಯಾಧಿಕಾರಿ ಶ್ರವಣ್ ಕುಮಾರ್, ಸುರತ್ಕಲ್ ಬೀಟ್ ಅರಣ್ಯ ಅಧಿಕಾರಿ ಗಂಗಾಧರ್ ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ  ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,ಉಪಾಧ್ಯಕ್ಷ ಭಾಸ್ಕರ ರೈಕಟ್ಟಾ,ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ,ಕಾರ್ಯಕಾರಿ ಸಮಿತಿ ಸದಸ್ಯ  ರಾಜೇಶ್ ದಡ್ಡಂಗಡಿ,ಕೋಡಿಕೆರೆ ಎಸ್ ಟಿ ಪಿ ಗುತ್ತಿಗೆದಾರ ಶಾಂತರಾಜು ಮೊದಲಾದವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ