image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ ತಾಲೂಕಿನಲ್ಲಿ ಉತ್ತಮ ಮಳೆ: ಶಾಲೆಗೆ ರಜೆ ಘೋಷಣೆ

ಬೆಳ್ತಂಗಡಿ ತಾಲೂಕಿನಲ್ಲಿ ಉತ್ತಮ ಮಳೆ: ಶಾಲೆಗೆ ರಜೆ ಘೋಷಣೆ

ಬೆಳ್ತಂಗಡಿ: ಕಳೆದ ವಾರ ಕೊಂಚ ಬಿಡುವು ನೀಡಿ, ಕಳೆದೆರಡು ಮೂರು ದಿನಗಳಿಂದ ಮತ್ತೆ ಚುರುಕಾಗಿರುವ ಮಳೆ, ದಕ್ಷಿಣ ಕನ್ನಡ ಮತ್ತು ಮಲೆನಾಡಿನಲ್ಲಿ ಜೋರಾಗಿ ಸುರಿಯುತ್ತಿದೆ. ಇದರ ಪರಿಣಾಮ ನದಿಗಳು ಉಕ್ಕಿ ಹರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಹರಿಯುವ ನದಿಗಳಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಿದೆ. ನೇತ್ರಾವತಿ ಸೇರಿದಂತೆ ತಾಲೂಕಿನ ವಿವಿಧೆಡೆಗಳಲ್ಲಿ ಹರಿಯುವ ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿ ತಗ್ಗು ಪ್ರದೇಶಗಳ ಕೃಷಿ ಭೂಮಿಗೆ ನೀರು ನುಗ್ಗಿದೆ.‌ ಶಿಶಿಲದ ಕಪಿಲ ನದಿ ಉಕ್ಕಿದ್ದು ಶ್ರೀ ಶಿಶಿಲೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.

ಮಳೆಗೆ ಅಲ್ಲಲ್ಲಿ ಗುಡ್ಡ ಕುಸಿತ, ಮನೆಗಳಿಗೆ ಹಾನಿ ಸಂಭವಿಸಿದ ಘಟನೆಗಳೂ ನಡೆದಿವೆ. ಮುಂದಿನ ಎರಡು ದಿನಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು (ಜೂನ್ 26, ಗುರುವಾರ) ರಜೆ ನೀಡಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಆದೇಶ ಹೊರಡಿಸಿದ್ದಾರೆ.

Category
ಕರಾವಳಿ ತರಂಗಿಣಿ