image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಲೋಕಸಭಾಧ್ಯಕ್ಷ ಓಂ ಬಿರ್ಲಾ ಭೇಟಿಯಾದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಲೋಕಸಭಾಧ್ಯಕ್ಷ ಓಂ ಬಿರ್ಲಾ ಭೇಟಿಯಾದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಮಂಗಳೂರು : ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಹೊಸದಿಲ್ಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್‌ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು ಸೆ.9 ಮತ್ತು 10ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು. ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಥಮ ಬಾರಿಗೆ ಅಂತರ್‌ರಾಷ್ಟ್ರೀಯ ವ ಮಟ್ಟದ ಕಾಮನ್‌ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿ ಸುವ ಕುರಿತು ಮತ್ತು ಸಮ್ಮೇಳನದಲ್ಲಿ ಚರ್ಚಿಸಬೇಕಾದ ವಿಷಯಗಳ ಕುರಿತು ಸಹ ಸಮಾಲೋಚನೆ ನಡೆಸಿದರು.

ಸಮ್ಮೇಳನದ ಉದ್ಘಾಟನಾ ಸಮಾರಂಭವನ್ನು ಸೆ.8ರಂದು ವಿಧಾನಸೌಧದ ಬೃಹತ್ ಮೆಟ್ಟಲುಗಳ ಮೇಲೆ ಹಮ್ಮಿಕೊಳ್ಳುವ ಬಗ್ಗೆ ಹಾಗೂ ಕರ್ನಾಟಕ ವಿಧಾನಸಭೆಯಲ್ಲಿ ಇತ್ತೀಚೆಗೆ ಜಾರಿಗೆ ತಂದಿರುವ ಅನೇಕ ಪ್ರಗತಿ ಪರ ಬದಲಾವಣೆಗಳನ್ನು ಸಹ ಲೋಸಭಾಧ್ಯಕ್ಷರ ಗಮನಕ್ಕೆ ತಂದರು. ಬೆಂಗಳೂರು ನಗರ ಅಂತರ್‌ರಾಷ್ಟ್ರೀಯವಾಗಿ ಸಿಲಿಕಾನ್ ಸಿಟಿಯಾಗಿರುವುದರಿಂದ ಇಂತಹ ಸಮ್ಮೇಳನಗಳನ್ನು ನಡೆಸುತ್ತಿ ರುವುದು ಅತ್ಯಂತ ಸೂಕ್ತ ಎಂದು ಲೋಕಸಭಾಧ್ಯಕ್ಷರು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಕರ್ನಾಟಕ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ಲೋಕಸಭಾ ಸಚಿವಾಲಯದ ಅಧಿಕಾರಿಗಳು ಹಾಜರಿದ್ದರು.

Category
ಕರಾವಳಿ ತರಂಗಿಣಿ