ಮಂಗಳೂರು: 2025-26 ನೇ ಸಾಲಿನ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವೆಬ್‍ಸೈಟ್ kacdc.Karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ/ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ.
ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ 0824-2456544 ಅಥವಾ ಯೋಜನೆಗಳ ಮಾರ್ಗಸೂಚಿಗಳು,ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ವಿಳಾಸಗಳನ್ನು ಹಾಗೂ ವಿವರಗಳನ್ನು ವೆಬ್‍ಸೈಟ್ kacdc.Karnataka.gov.in ಮೂಲಕ ಪಡೆಯಬಹುದು ಎಂದು ನಿಗಮದ ಜಿಲ್ಲಾ ವ್ಯವಸಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.