ಮಂಗಳೂರು: ನಗರದ ಬಡಗ ಎಕ್ಕಾರು ಗ್ರಾಮದ ನೀರುಡೆ ಸೈಟ್ ನಿವಾಸಿ ಯುವರಾಜ್ ಶೆಟ್ಟಿ (37) ಎಂಬವರು ಮುದರಂಗಡಿಗೆ ಹೋಗಿ ಬರುವುದಾಗಿ ತಿಳಿಸಿ ಕೆಲಸಕ್ಕೂ ಹೋಗದೆ ಮನೆಗೂ ಬಾರದೆ ಕಾಣೆಯಾಗಿರುವ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದವರ ಚಹರೆ:- ಎತ್ತರ 5.4 ಅಡಿ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ. ಕಾಣೆಯಾದ ದಿನ ಕ್ರೀಂ ಬಣ್ಣದ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಅಂಗಿ ಧರಿಸಿದ್ದರು.
ಕಾಣೆಯಾದವರ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಬಜಪೆ ಪೋಲಿಸ್ ಠಾಣೆಗೆ ಸಂರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.